ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರ ಆರ್ಥಿಕ ಸಮಸ್ಯೆಯನ್ನು ನಿಯಂತ್ರಿಸುವ ಬದಲು ಸರ್ಕಾರ ತೆರಿಗೆ ಸಂಗ್ರಹಿಸುವ ಕಾರ್ಯದಲ್ಲಿ ನಿರತವಾಗಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ಸಾಧಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು
ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿದ್ದಾರೆ, ಆದರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.