ಮಂಗಳೂರು (ಫೆ.23) : ಸುಮಾರು ಒಂದು ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ ನಂತರ ಮಂಗಳೂರು ಮೂಲದ ಕುಖ್ಯಾತ ಗ್ಯಾಂಗ್ ಸ್ಟರ್ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ರವಿ ಪೂಜಾರಿ ವಿರುದ್ಧ ಬ್ಲಾಕ್ ಮೇಲ್, ಅಪಹರಣ, ಕೊಲೆ ಬೆದರಿಕೆ, ಕೊಲೆ ಯತ್ನ ಸೇರಿದಂತೆ ಸುಮಾರು 80 ಪ್ರಕರಣಗಳು ದಾಖಲಾಗಿವೆ.
ಬೆಂಗಳೂರಿನ ನ್ಯಾಯಾಲಯದಲ್ಲಿ ಸುಮಾರು ಒಂದು ವರ್ಷ ಹೋರಾಟ ನಡೆಸಿದ ನಂತರ ಕೊನೆಗೂ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿದೆ. 2016ರ ಗಾಜಲಿ ಹೋಟೆಲ್ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
59 ವರ್ಷದ ರವಿ ಪೂಜಾರಿ 2 ದಶಕಗಳಿಂದ ವಿದೇಶಗಳಲ್ಲಿ ತಲೆ ಮರೆಸಿಕೊಂಡಿದ್ದು, ಕಳೆದ ವರ್ಷ ಫೆಬ್ರವರಿಯಲ್ಲಿ ಸೆಗಲ್ ನಲ್ಲಿ ಬಂಧಿಸಿ ಕರ್ನಾಟಕಕ್ಕೆ ಕರೆತರಲಾಗಿತ್ತು.