ಮಧ್ಯಪ್ರದೇಶ (ಫೆ.23): ಪೆಟ್ರೋಲ್ ಬಂಕ್ ಹೊರಗಡೆ ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಆರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಇಂದೋರ್ನಲ್ಲಿ ನಡೆದಿದೆ.
ತಡರಾತ್ರಿ ಢಾಬಾದಿಂದ ಊಟ ಮಾಡಿ ಮನೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಕಾರು ಟ್ಯಾಂಕರ್ಗೆ ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಮೃತದೇಹಗಳನ್ನು ಹೊರಕ್ಕೆ ತೆಗೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.