ಉಡುಪಿ: ಇಂದಿನ ಪ್ರಮುಖ ಸುದ್ದಿ ಮಾಹಿತಿಗಳು

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು

ಉಡುಪಿ ಫೆಬ್ರವರಿ 23: ಆಯುಷ್ಮಾನ್ ಕಾರ್ಡ್ನಿಂದ ನೆರವು ಪಡೆಯಲು ಇರುವ ಅರ್ಹತೆಗಳ ಕುರಿತಂತೆ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಹಲವು ಗೊಂದಲಗಳಿದ್ದು, ಯೋಜನೆಯಲ್ಲಿನ ಅರ್ಹತೆಗಳ ಕುರಿತು ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರುಗಳಿಗೆ ತರಬೇತಿ ಆಯೋಜಿಸಿ, ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿಯು ಯಾವ ಸಂದರ್ಭದಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಬಹುದು, ಯಾವ ಚಿಕಿತ್ಸೆಗೆ ರೆಫರಲ್ ಪತ್ರ ತರಬೇಕು, ವೈದ್ಯರುಗಳು ಯೋಜನೆಯಲ್ಲಿನ ಯಾವ ಕಾಯಿಲೆಗಳಿಗೆ ರೆಫರಲ್ ಪತ್ರ ನೀಡಬೇಕು, ತುರ್ತು ಸಂದರ್ಭದಲ್ಲಿ ಎಲ್ಲಿ ದಾಖಲಾಗಬೇಕು ಎಂಬ ಬಗ್ಗೆ ರೋಗಿ ಹಾಗೂ ವೈದ್ಯರಿಗೂ ಸಹ ಹಲವು ಗೊಂದಲಗಳಿದ್ದು, ಇದನ್ನು ಬಗೆಹರಿಸಲು, ಜಿಲ್ಲೆಯ ಸರ್ಕಾರಿ ವೈದ್ಯರುಗಳಿಗೆ ಶೀಘ್ರದಲ್ಲಿ ತರಬೇತಿ ಆಯೋಜಿಸಿ ಎಂದು ದಿನಕರ ಬಾಬು ಸೂಚಿಸಿದರು.

ಜಿಲ್ಲೆಯ ಎಲ್ಲಾ ಆಂಬುಲೆನ್ಸ್ ಚಾಲಕರಿಗೂ ಸಹ ತರಬೇತಿ ಆಯೋಜಿಸಿ, ಯೋಜನೆಯ ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್ ತಿಳಿಸಿದರು.

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಇದುವರೆಗೆ ಶೇ.137 ರಷ್ಟು ಸಾಧನೆ ಅಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕೆರೆ ಮತ್ತು ತೋಡುಗಳ ಹೂಳೆತ್ತುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ತೆಗೆದುಕೊಳ್ಳುವಂತೆ ತಿಳಿಸಿದ ಅಧ್ಯಕ್ಷರು, ಹೂಳೆತ್ತಿದ ನಂತರ ಮಣ್ಣಿನಿಂದ ಜೆಡ್ಡುಗಳನ್ನು ನಿರ್ಮಿಸಿ, ಜಿಲ್ಲೆಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಉದ್ಯೋಗ ಖಾತರಿ ಯೋಜನೆಯಿಂದ ಬಾವಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಿ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಒಣ ತ್ಯಾಜ್ಯ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಕಾರ್ಕಳದಲ್ಲಿ ಎಂಆರ್‌ಎಫ್ ಕಾಮಗಾರಿ ಪ್ರಗತಿಯಲ್ಲಿದ್ದು, ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು.

ಜಿಲ್ಲೆಯಲ್ಲಿ 6 ನೇ ತರಗತಿಯಿಂದ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ತೆರೆದಿದ್ದು, ಇದುವರೆಗೂ ಯಾವುದೇ ಮಕ್ಕಳಲ್ಲಿ ಕೋವಿಡ್ ಕಂಡು ಬಂದಿರುವುದಿಲ್ಲ. ಎಸ್.ಓ.ಪಿ. ಪ್ರಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ 3 ನೇ ಸ್ಥಾನದಲ್ಲಿದೆ ಎಂದು ಡಿಡಿಪಿಐ ಮಾಹಿತಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ತರಗತಿಗೆ ಹಾಜರಾಗದೇ, ಆನ್‌ಲೈನ್ ತರಗತಿಯಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ ಎಂದು ಸುಮಿತ್ ಶೆಟ್ಟಿ ಹೇಳಿದರು.

ಇದೇ ಸಂದರ್ಭದಲ್ಲಿ ಮ್ಯಾನುವೆಲ್ ಸ್ಕಾವೆಂರ‍್ಸ್ ನಿಷೇಧ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಶಿಕ್ಷಣಾ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಉಪಸ್ಥಿತರಿದ್ದರು.

ಪ್ರಥಮ ಹಂತದ ಕೋವಿಡ್ ಲಸಿಕೆ: ಇಂದು ಕೊನೆಯ ಅವಕಾಶ

ಉಡುಪಿ ಫೆಬ್ರವರಿ 23 : ಪ್ರಥಮ ಹಂತದ ಕೋವಿಡ್ ಲಸಿಕೆ ಪಡೆಯಲು ಈಗಾಗಲೇ ನೊಂದಾಯಿಸಿಕೊAಡು, ಇದುವರೆಗೂ ಲಸಿಕೆ ಪಡೆಯದ ಸರಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು ಲಸಿಕೆ ಪಡೆಯಲು ಇಂದು (ಬುಧವಾರ) ಕೊನೆಯ ಅವಕಾಶ ನೀಡಲಾಗಿದೆ.

ಆದ್ದರಿಂದ ಪ್ರಥಮ ಹಂತದ ಲಸಿಕೆ ಪಡೆಯಲು ಹೆಸರು ನೊಂದಾಯಿಸಿಕೊAಡು, ಇದುವರೆಗೂ ಲಸಿಕೆ ಪಡೆಯದ ಸರಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ಜಿಲ್ಲೆಯಲ್ಲಿನ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಾದ ಕೆ.ಎಂ.ಸಿ. ಮಣಿಪಾಲ, ಸಿ.ಎಸ್.ಐ. ಲೊಂಬಾರ್ಡ್ ಆಸ್ಪತ್ರೆ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಎಸ್.ಡಿ.ಎಂ ಉದ್ಯಾವರ, ಕುಂದಾಪುರದ ಆದರ್ಶ ಆಸ್ಪತ್ರೆ, ಎನ್.ಆರ್. ಆಚಾರ್ಯ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ವಯೋಶ್ರೇಷ್ಠ ಸಮ್ಮಾನ್ ರಾಷ್ಟç ಪ್ರಶಸ್ತಿ- ಪ್ರಸ್ತಾವನೆ ಆಹ್ವಾನ

ಉಡುಪಿ ಫೆಬ್ರವರಿ 23 : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿರವರು 2021-22 ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ / ಸಂಸ್ಥೆಗಳಿAದ ವಯೋಶ್ರೇಷ್ಠ ಸಮ್ಮಾನ್ 2021 ರಾಷ್ಟç ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿರುತ್ತಾರೆ.
ಸದರಿ ಪ್ರಶಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ hಣಣಠಿ://soಛಿiಚಿಟರಿusಣiಛಿe.ಟಿiಛಿ.iಟಿ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810/ 811 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಉಡುಪಿ ಫೆಬ್ರವರಿ 23 : ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿಯ ರಾಘವೇಂದ್ರ ಉಡುಪ ಇವರು ಕಲಾಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಹಿರಿಯ ನಾಗರಿಕರ ಪ್ರಶಸ್ತಿ, ವಿಕಲಚೇತನರ ಪುನರ್ವಸತಿ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ಕುಂದಾಪುರದ ಮಂಜುನಾಥ್ ಹೆಬ್ಬಾರ್ ಇವರಿಗೆ ವೈಯಕ್ತಿಕ ಪ್ರಶಸ್ತಿ ಹಾಗೂ ಅರ್ಚನಾ ಟ್ರಸ್ಟ್ನ ಆಸರೆ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆ, ಮಣಿಪಾಲ ಇವರಿಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆ ಪ್ರಶಸ್ತಿ ಲಭಿಸಿರುತ್ತದೆ.

ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

Translate »
error: Content is protected !!