ಬಂದರು ಗೇಟಿನಲ್ಲಿ ಮಕ್ಕಳು ಒಳ ಪ್ರವೇಶಿಸದಂತೆ ತಡೆಯಲು ಬಂದರು ಇಲಾಖೆಗೆ ಖಡಕ್ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ: ಜಿಲ್ಲಾಧಿಕಾರಿ ಜಿ .ಜಗದೀಶ್ ರವರ ಅಧ್ಯಕ್ಷತೆಯಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.ಮಕ್ಕಳ ಸಂರಕ್ಷಣೆಗೆ ಸಂಬಂಧಪಟ್ಟ ಹಾಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿಯ ಸಭೆಗಳನ್ನು ತ್ರೈಮಾಸಿಕವಾಗಿ ನಡೆಸಿ ವರದಿಯನ್ನು ನೀಡುವಂತೆ ಪಂಚಾಯತ್ ಮಟ್ಟದ ಅಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಆಯುವ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಸಬೇಕು .ಬಂದರು ಗೇಟಿನಲ್ಲಿ ಮಕ್ಕಳು ಒಳ ಪ್ರವೇಶಿಸದಂತೆ ತಡೆಯಲು ಬಂದರು ಇಲಾಖೆಗೆ ಖಡಕ್ ಎಚ್ಚರಿಕೆ ನೀಡಿದರು .ಖಾಸಗಿ ಶಾಲಾ ವಾಹನಗಳಲ್ಲಿ ಚೈಲ್ಡ್ ಲೈನ್ 1098 ಕಟ್ಟುನಿಟ್ಟಾಗಿ ಅಳವಡಿಸುವಂತೆ ಹಾಗೂ ವಾಹನಗಳಲ್ಲಿ ದೂರು ಪೆಟ್ಟಿಗೆ ಅಳವಡಿಸುವಂತೆ ಸೂಚಿಸಿದರು.ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಮತ್ತು ಆಪ್ತ ಸಮಾಲೋಚಕರನ್ನು ಗುರುತಿಸುವಂತೆ ಸೂಚಿಸಿದರು.ಮಕ್ಕಳ ರಕ್ಷಣಾ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಿಸುವ ಬಗ್ಗೆ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು .ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ .ನವೀನ್ ಭಟ್ .ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ .ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ .ಶೇಷಪ್ಪ .ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ .ಕಾರ್ಮಿಕ ಅಧಿಕಾರಿ ಕುಮಾರ್ .ಕೋಟ ಠಾಣಾ ಸಹಾಯಕ ಉಪ ನಿರೀಕ್ಷಕಿ ಮುಕ್ತಾ .ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು .

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

Translate »
error: Content is protected !!