ಸೀತಾಪುರ (ಫೆ.26): ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ ಬಳಿಕ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಮಹಮೂದಾಬಾದ್ ಪ್ರದೇಶದಲ್ಲಿ ನಿನ್ನೆ ರಾತ್ರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಇಲ್ಲಿ ಊಟ ಮಾಡಿದ 40ಕ್ಕೂ ಹೆಚ್ಚು ಮಂದಿ ಅಶ್ವಸ್ತರಾಗಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಪೂರಿತ ಆಹಾರ ಸೇವನೆಯಿಂದಾಗಿ ಎಲ್ಲರೂ ಅಸ್ವಸ್ಥರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯ ಡಾ.ಅನ್ವರ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.