ಅಹಮದಾಬಾದ್: ಭಾರತದ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈಗಾಗಲೇ ಮುಕ್ತಾಯಗೊಂಡಿರುವ ಮೊದಲ ಮೂರು ಟೆಸ್ಟ್ ಪಂದ್ಯಗಳ ಪೈಕಿ 2 ರಲ್ಲಿ ಭಾರತ ಜಯಗಳಿಸಿದ್ದು, ಸರಣಿ ಮೇಲೆ ಬಿಗಿ ಹಿಡಿತ ಹೊಂದಿದೆ. ಅದರೆ ಮೊದಲ ಪಂದ್ಯ ಗೆದ್ದು ಬಳಿಕ 2 ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ಸರಣಿ ಸಮಬಲ ಮಾಡಿಕೊಳ್ಳಲು ಈ ಪಂದ್ಯ ಗೆಲ್ಲಲೇಬೇಕಿದೆ. ಅಲ್ಲದೆ ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಭಾರತ ಕ್ರಿಕೆಟ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ಫೈನಲ್ನಲ್ಲಿ ಸ್ಥಾನ ಭದ್ರಪಡಿಸುವ ಹಾದಿಯಲ್ಲಿದೆ. ಇಂಗ್ಲೆಂಡ್ ಎದುರಿನ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ನಲ್ಲಿ ಡ್ರಾ ಮಾಡಿಕೊಂಡರೂ ಭಾರತದ ಈ ಕನಸು ನನಸಾಗಲಿದೆ.