ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಮೃತ ಯುವಕ ಕೆಪಿಟಿ ಕಾಲೇಜಲ್ಲಿ ಓದುತ್ತಿದ್ದು, ಇದರ ಜೊತೆಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಕ್ಯಾಂಟೀನ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಶಾರ್ಕ್ ಸರ್ಕ್ಯೂಟ್ ಆಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.