ಕೇರಳ ಗಡಿ ಬಂದ್ – ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಮಾರಕ ಕೊರೋನಾ ಸೋಂಕು ಉಲ್ಬಣ ಹಿನ್ನಲೆಯಲ್ಲಿ ಕೇರಳದಿಂದ ಕರ್ನಾಟಕ ಪ್ರವೇಶಿಸುವ ಗಡಿಗಳನ್ನು ಬಂದ್ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಾಸರಗೋಡು ಮೂಲದ ವಕೀಲ ಬಿ. ಸುಬ್ಬಯ್ಯ ರೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ಪೀಠ, ‘ಯಾವ ಕಾನೂನಿನ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳದ ಗಡಿಯಲ್ಲಿ ಪ್ರವೇಶ ನಿರ್ಬಂಧಿಸಿದೆ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ ಬೇರೆ ಜಿಲ್ಲೆಗಳಿಂದ ಕೇರಳದ ಜನರು ಕರ್ನಾಟಕಕ್ಕೆ ಪ್ರವೇಶಿಸಬಹುದು. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರ ಪ್ರವೇಶಿಸಬಾರದೇ?…. ದಕ್ಷಿಣ ಕನ್ನಡಕ್ಕೆ ಪ್ರವೇಶಿಸಲು 23 ಕಡೆ ಅವಕಾಶವಿದೆ. ಆದರೆ, ನಾಲ್ಕು ಕಡೆಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ? ಯಾವ ಕಾನೂನಿನಡಿ ನಿರ್ಬಂಧ ಹೇರಲಾಗಿದೆ? ಈ ನಿರ್ಧಾರ ಹಾಸ್ಯಾಸ್ಪದವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಕರ್ನಾಟಕ ಸರ್ಕಾರದ ಫೆಬ್ರವರಿ 16ರ ಸುತ್ತೋಲೆ ಪ್ರಕಾರ ಕೇರಳದಿಂದ ಆಗಮಿಸುವ ಜನರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ಕೇಳಬಹುದು. ಪ್ರವೇಶಕ್ಕೆ ನಿರ್ಬಂಧ ಹೇರುವಂತಿಲ್ಲ. ಪ್ರವೇಶ ದ್ವಾರ ಮುಚ್ಚುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆಯೇ? ಎಂದು ಪೀಠ ಜಿಲ್ಲಾಡಳಿತವನ್ನು ಪ್ರಶ್ನಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರಶ್ನಿಸಿ ವಕೀಲ ಬಿ. ಸುಬ್ಬಯ್ಯ ರೈ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರು ಎತ್ತಿರುವ ಕಾನೂನು ಸಮಸ್ಯೆಗಳನ್ನು ಜಿಲ್ಲಾಡಳಿತ ಎದುರಿಸಬೇಕು ಎಂದೂ ನ್ಯಾಯಾಲಯ ಹೇಳಿದೆ. ಅಂತೆಯೇ ಅರ್ಜಿಯ ಮುಂದಿನ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 18ಕ್ಕೆ ಮುಂದೂಡಿದೆ.

ಕೇರಳದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾದ ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇರಳ ಗಡಿಯನ್ನು ಬಂದ್ ಮಾಡಿದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!