ಉಡುಪಿಯ ವಿವಿಧ ಆಸ್ಪತ್ರೆಗಳಿಗೆ ಸಚಿವ ಡಾ.ಸುಧಾಕರ್ ಭೇಟಿ: ಪರಿಶೀಲನೆ

ಉಡುಪಿ, ಮಾ.30: ಉಡುಪಿಗೆ ಆಗಮಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು ಉಡುಪಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗೆಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾಸ್ಪತ್ರೆಯ ವೈದ್ಯಕೀಯ ವ್ಯವಸ್ಥೆಗಳ ಬಗ್ಗೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಬಳಿಕ ರೋಗಿಗಳ ಬಳಿ ತೆರಳಿ ಅವರ ಯೋಗ ಕ್ಷೇಮವನ್ನು ವಿಚಾರಿಸಿದರು.ಇದೇ ವೇಳೆ ಸಚಿವರು ಆಸ್ಪತ್ರೆಯಲ್ಲಿರುವ ಕೋವಿಡ್ ಲಸಿಕಾ ಅಭಿಯಾನ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ – 19 ಬಗ್ಗೆ ಜಾಗೃತಿ ಮೂಡಿಸಿ, ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಕೋವಿಡ್ ಲಸಿಕೆ ಪಡೆಯಲು ಪ್ರೇರೇಪಿಸುವ ಉದ್ದೇಶದಿಂದ ಲಸಿಕೆ ಪಡೆಯಲು ಬರುವವರಿಗೆ ಉಚಿತ ವಾಹನದ ವ್ಯವಸ್ಥೆ ಹಾಗೂ ಕೋವಿಡ್ ಲಸಿಕೆ ಕುರಿತು ಸೂಕ್ತ ಮಾಹಿತಿಯನ್ನು ನೀಡಲು ಈ ಕೋವಿಡ್ ಲಸಿಕಾ ಅಭಿಯಾನ ಕೇಂದ್ರವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಆರಂಭಿಸಿ ಇಲ್ಲಿ ಸ್ವಯಂ ಪ್ರೇರಿತರಾಗಿ ಸೇವೆಸಲ್ಲಿಸುತ್ತಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ರವರು ಸಚಿವರಲ್ಲಿ ತಿಳಿಸಿದರು.

ಇದಕ್ಕೂ ಮೊದಲು ಸಚಿವರು ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಭೇಟಿ ನೀಡಿ ಅಲ್ಲಿನ ವೈದ್ಯಕೀಯ ವ್ಯವಸ್ಥೆಗಳ ಬಗ್ಗೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಅಲ್ಲಿಂದ ಸಚಿವರು ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವೈದ್ಯಕೀಯ ವ್ಯವಸ್ಥೆಗಳ ಬಗ್ಗೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಾ.ಬಿ.ಆರ್. ಶೆಟ್ಟಿ, ಅಲ್ಲಿನ ವೈದ್ಯಕೀಯ ಅಧೀಕ್ಷಕಿ ಡಾ.ಶಿಕಾ ಗಾರ್ಗ್ ಮೊದಲಾದವರು ಇದ್ದರು

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!