ಹಾಸನ ರೇವ್ ಪಾರ್ಟಿ: ಸಿಸಿಬಿ ಸಿಬ್ಬಂದಿ ಎಂದು ಪೊಲೀಸರನ್ನೇ ಯಾಮಾರಿಸಿದ ಮಹಿಳಾ ಹೆಡ್ ಕಾನ್‌ಸ್ಟೇಬಲ್ ಅಮಾನತು

ಮಂಗಳೂರು: ಕೆಲ ದಿನಗಳ ಹಿಂದೆ ಹಾಸನದ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಶ್ರೀಲತಾ ಎಂಬವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ.
ಶ್ರೀ ಲತಾ ಆಲೂರಿನ ರೆಸಾರ್ಟ್ ಒಂದರಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದು, ಈ ಪಾರ್ಟಿಯಲ್ಲಿ ರಾಜ್ಯದ ವಿವಿಧೆಡೆಗಳಿಂದ ಹಲವು ಯುವಕ ಯುವತಿಯರು ಪಾಲ್ಗೊಂಡಿದ್ದರು.

ಪಾರ್ಟಿಯಲ್ಲಿ ನೂರಕ್ಕೂ ಹೆಚ್ಚು ಮಂದಿ ಯಾವುದೇ ಅನುಮತಿ ಇಲ್ಲದೇ, ಕೋವಿಡ್ ಮಾನದಂಡಗಳನ್ನು ಗಾಳಿಗೆ ತೂರಿ ಭಾಗವಹಿಸಿದ್ದರು.

ಈ ವೇಳೆ ಮದ್ಯಪಾನ, ಡ್ರಗ್ಸ್ ಸೇವನೆ ಕೂಡಾ ನಡೆದಿತ್ತು ಎಂದು ಹೇಳಲಾಗುತ್ತಿದೆ.ಅನುಮತಿ ಇಲ್ಲದ ಪಾರ್ಟಿಗೆ ಪೊಲೀಸರು ದಿಢೀರ್ ರೈಡ್ ನಡೆಸಿದ್ದು, ಈ ವೇಳೆ ಇಲ್ಲಿ ಯುವಕ ಯುವತಿಯರು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರೈಡ್ ವೇಳೆ ಶ್ರೀಲತಾ ತಾನು ಸಿಸಿಬಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಪೊಲೀಸರ ವಿರುದ್ದವೇ ವಾಗ್ವಾದ ನಡೆಸಿ ಯಾಮಾರಿಸಿದ್ದಳು. ಅಲ್ಲದೇ ಈಕೆಯ ಮಗನೂ ಕೂಡಾ ಪಾರ್ಟಿಯಲ್ಲಿ ಭಾಗವಹಿಸಿದ್ದು, ಆಯೋಜಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.

ಸದ್ಯ ಠಾಣಾ ಜಾಮೀನಿನಲ್ಲಿ ಶ್ರೀಲತಾ ಹೊರಬಂದಿದ್ದು, ಆಕೆಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!