ಹಡಿಲು ಭೂಮಿ ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ನೋಟೀಸ್ ಜಾರಿ: ಉಡುಪಿ ಡಿಸಿ

ಉಡುಪಿ, ಎ.19: ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇರುವುದರಿಂದ ಸಂಬಂಧಪಟ್ಟ ಹಡಿಲು ಭೂಮಿಯ ಮಾಲಕರಿಗೆ ನೋಟೀಸ್ ಜಾರಿ ಮಾಡಲಾಗುವುದು. ಆದುದರಿಂದ ಸಂಬಂಧಪಟ್ಟವರು ತಕ್ಷಣ ಹಡಿಲು ಬಿಟ್ಟ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಬಳಿ ಸೋಮವಾರ ಕೃಷಿ ಚಟು ವಟಿಕೆ ನಡೆಸುವ ಗದ್ದೆಗಳಿಗೆ ಸಮರ್ಪಕವಾಗಿ ನೀರು ಹರಿದು ಹೋಗುವ ತೋಡು ಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಡಿಲು ಬಿಟ್ಟ ಭೂಮಿ ಮತ್ತು ಅದರ ಮಾಲಕರನ್ನು ಗುರುತಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ. ಅಂತಹ ಭೂಮಿಯ ಮಾಲಕರಿಗೆ ನೋಟೀಸ್ ಜಾರಿ ಮಾಡಿ, ಆ ಬಳಿಕವೂ ಅದರಲ್ಲಿ ಕೃಷಿ ಚಟುವಟಿಕೆ ಮಾಡ ದಿದ್ದರೆ ಅಂತಹ ಭೂಮಿಗಳನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗು ವುದು ಎಂದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶೇಷಕೃಷ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಸದಸ್ಯ ಮಂಜುನಾಥ್ ಮಣಿಪಾಲ್, ನಿಟ್ಟೂರು ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!