ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಆಗ್ರಹಕ್ಕೆ ಕೋವಿಡ್ ಸಂಬಂಧಿತ ಸಮಸ್ಯೆ ನೀಗಿಸಲು ಕ್ರಿಯಾಶೀಲವಾದ ಜಿಲ್ಲಾಡಳಿತ – ಹುಸೇನ್ ಕೋಡಿಬೆಂಗ್ರೆ

ಉಡುಪಿ: ನಿನ್ನೆ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಕಾರ್ಯಕರ್ತರು ಉಡುಪಿಯಲ್ಲಿ ಧ್ವನಿಯೆತ್ತಿದ ಪರಿಣಾಮ ಇದೀಗ ಜಿಲ್ಲಾಡಳಿತ ಆಕ್ಸಿಜನ್ ಕೊರತೆ ಸೇರಿದಂತೆ ಕೋವಿಡ್ ಸಂಬಂಧಿತ ಸಮಸ್ಯೆಗಳನ್ನು ನೀಗಿಸಲು ಕ್ರಿಯಾಶೀಲವಾಗಿದೆ ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್’ನ ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ತಿಳಿಸಿದ್ದಾರೆ.

ಇದೀಗ ಕೂಡಲೇ ಬಳ್ಳಾರಿಯಿಂದ ಹತ್ತು ಮೆಟ್ರಿಕ್ ಟನ್ ಆಕ್ಸಿಜನ್ ತರಿಸಿದ್ದಾರೆ. ಅದರೊಂದಿಗೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಇಂದು ಜಿಲ್ಲಾಧಿಕಾರಿ ಮತ್ತು ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸೋಂಕಿತ ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಹೋದಾಗ ಅಲ್ಲಿನ ಅವ್ಯವಸ್ಥೆ ಕಂಡು ಸಾಲಿಡಾರಿಟಿ ಕಾರ್ಯಕರ್ತರು ಅದರ ವಿರುದ್ಧ ಮಾಧ್ಯಮದ ಮೂಲಕ ಧ್ವನಿಯೆತ್ತಿದ್ದರು ಅದರ ಪರಿಣಾಮ ಇದೀಗ ಗೋಚರಿಸುತ್ತಿದ್ದು ಜಿಲ್ಲಾಡಳಿತ ಕ್ರಿಯಾಶೀಲವಾಗಿದೆ. ಜಿಲ್ಲಾಡಳಿತ ಕೋವಿಡ್’ಗೆ ಸಂಬಂಧಿತ ಎಲ್ಲ ರೀತಿಯ ಸೌಲಭ್ಯವನ್ನು ಒದಗಿಸಬೇಕು.

ಉಡುಪಿ ಕ್ಷೇತ್ರ ಶಾಸಕರು ಕೇವಲ ಸ್ಥಳ ಪರಿಶೀಲಿಸಿ ಕುಳಿತುಕೊಳ್ಳದೆ ತಕ್ಷಣವೆಂಬಂತೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಯೋಜನೆಯಂತೆ ಆಮ್ಲಜನಕ ಘಟಕ ತಕ್ಷಣ ಸ್ಥಾಪಿಸಬೇಕು. ಅದರೊಂದಿಗೆ ಐಸಿಯು ಬೆಡ್’ನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದು ಹುಸೇನ್ ಕೋಡಿಬೆಂಗ್ರೆ ಆಗ್ರಹಿಸಿದ್ದಾರೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

Translate »
error: Content is protected !!