ಮೂರಲ್ಲ, 28 ಮಂದಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ, ಸುಧಾಕರ್ ಹೇಳಿರುವುದು ಶುದ್ಧ ಸುಳ್ಳು – ಸಿದ್ದರಾಮಯ್ಯ

ಕಳೆದು ಒಂದು ದಿನದಲ್ಲಿ ಚಾಮರಾಜನಗರ ಜಿಲ್ಲೆಯೊಂದರಲ್ಲೇ 28 ರೋಗಿಗಳು ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ. ಕೇವಲ 3 ಜನ ಮಾತ್ರ ಆಮ್ಲಜನಕ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿರುವುದು ಶುದ್ಧ ಸುಳ್ಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆಗನುಗುಣವಾಗಿ ಪ್ರತಿನಿತ್ಯ ಕನಿಷ್ಟ 350 ಆಕ್ಸಿಜನ್ ಸಿಲಿಂಡರ್ ಅಗತ್ಯವಿದೆ, ಆದರೆ ಕಳೆದ ಭಾನುವಾರ ಸರಬರಾಜು ಆದದ್ದು ಕೇವಲ 126 ಸಿಲಿಂಡರ್. ಹೀಗಾಗಿ ಸಂಜೆಯ ವೇಳೆಗೆ ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಖಾಲಿಯಾಗಿ ರೋಗಿಗಳು ಸಾವಿಗೀಡಾಗಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ನಾನು ಪ್ರಶ್ನಿಸಿದಾಗ “ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ, ನಾವು ಆಕ್ಸಿಜನ್ ವ್ಯವಸ್ಥೆ ಮಾಡುವ ಎಷ್ಟೇ ಪ್ರಯತ್ನ ಮಾಡಿದರೂ ಅದರಿಂದ ಪ್ರಯೋಜನವಾಗಿಲ್ಲ” ಎಂಬ ಸತ್ಯಸಂಗತಿಯನ್ನು ಅಧಿಕಾರಿಗಳು ಹೇಳಿದ್ದಾರೆ.
ಇದಕ್ಕೆ ಸುಧಾಕರ್ ಏನಂತಾರೆ?

ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್, ಬೆಡ್‌ಗಳು, ವೈದ್ಯರು ಸೇರಿದಂತೆ ವಿವಿಧ ವೈದ್ಯಕೀಯ ಸವಲತ್ತುಗಳನ್ನು ಪೂರೈಕೆ ಮಾಡಬೇಕಾದುದ್ದು ರಾಜ್ಯ ಸರ್ಕಾರದ ಜವಾಬ್ದಾರಿ, ಈ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿರುವುದೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಕಾರಣ ಎಂದಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ಸಾವಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಸಚಿವರು ಈ ಮೂವರ ಹೇಳಿಕೆಗಳು ಭಿನ್ನವಾಗಿವೆ.
ಹಾಗಾಗಿ ಸತ್ಯ ಯಾವುದು? ಸುಳ್ಳು ಯಾವುದು? ಎಂದು ಜನರಿಗೆ ತಿಳಿಯಬೇಕಾದರೆ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು.

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ದುರಂತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ಶಾಂತಿ ಸಿಗಬೇಕು ಎಂದಾದರೆ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ. ಸ್ವತಂತ್ರ ತನಿಖಾಸಂಸ್ಥೆಯಿಂದ ತನಿಖೆಯಾಗದ ಹೊರತು ಸತ್ಯಾಸತ್ಯತೆ ಹೊರಬರುವ ವಿಶ್ವಾಸವಿಲ್ಲ.

ತಮ್ಮ ಬೇಜವಾಬ್ದಾರಿಯಿಂದ 24 ಜನ ರೋಗಿಗಳ ಸಾವಿಗೆ ಕಾರಣರಾದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಘಟನೆಯ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ. ಇವರಿಗೆ ಮಾನ ಮರ್ಯಾದಿಯಿದ್ದರೆ ತಮ್ಮ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರರು.

ಕೊರೊನಾ ಎರಡನೇ ಅಲೆ ಆರಂಭವಾಗಿ ಇಷ್ಟು ದಿನಗಳಾಯಿತು, ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಈ ವರೆಗೆ ಕೋವಿಡ್ ನಿರ್ವಹಣೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿಲ್ಲ, ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇವರು ಎಚ್ಚರವಾಗೋಕೆ ಇನ್ನೆಷ್ಟು ಅಮಾಯಕರು ಸಾಯಬೇಕು?

ಘಟನೆಯಲ್ಲಿ ಸಾವಿಗೀಡಾದವರಲ್ಲಿ ಬಹುತೇಕರು ಬಡವರು, ಕುಟುಂಬಕ್ಕೆ ಆಧಾರವಾಗಿದ್ದವರು, ಯುವಕರೇ ಆಗಿದ್ದಾರೆ. ಸರ್ಕಾರದ ಬೇಜವಾಬ್ದಾರಿಗೆ ಇಂದು ಅನೇಕ ಕುಟುಂಬಗಳು ಬೀದಿಪಾಲಾಗಿವೆ. ಹಾಗಾಗಿ ಮೃತ ರೋಗಿಗಳ ಕುಟುಂಬಕ್ಕೆ ತಲಾ ರೂ.25 ಲಕ್ಷ ಪರಿಹಾರವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!