ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ 19 ದಾದಿಯರ(ನರ್ಸ್) ಮೊದಲ ತಂಡ ಇಂದು ದೆಹಲಿಗೆ

ಮಣಿಪಾಲ, 4ನೇ ಮೇ 2021: ಪ್ರಸ್ತುತ ಭಾರತದ ರಾಜಧಾನಿ, ದೆಹಲಿಯಲ್ಲಿ ಕೊರೊನ ಸಾಂಕ್ರಾಮಿಕವೂ ವ್ಯಾಪಕವಾಗಿ ಹರಡಿರುವಿದರಿಂದ , ಮಣಿಪಾಲ ಸಂಸ್ಥೆಯ ಸಹ ಸಂಸ್ಥೆಯಾದ ಮಣಿಪಾಲ ಆಸ್ಪತ್ರೆ ದ್ವಾರಕಾದ ಬೇಡಿಕೆಯ ಮೇರೆಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ 19 ದಾದಿಯರ(ನರ್ಸ್) ಮೊದಲ ತಂಡ ಇಂದು ದೆಹಲಿಗೆ ತೆರಳಿತು. 03 ಮೇ 2021 ರಂದು ನರ್ಸಿಂಗ್ ವೃತ್ತಿಪರರ ಹೆಚ್ಚಿನ ಅವಶ್ಯಕತೆಯ ಕೋರಿಕೆಯನ್ನು ಮಣಿಪಾಲ ದ್ವಾರಕಾ ಆಸ್ಪತ್ರೆಯು ನೀಡಿತ್ತು . ಇದು ಇಡೀ ಮಣಿಪಾಲ ಸಮೂಹಕ್ಕೆ ಹೆಮ್ಮೆಯ ಕ್ಷಣವಾಗಿದೆ. ದಾದಿಯರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡುವುದಲ್ಲದೆ, ತಮ್ಮ ಆರೈಕೆ ಮತ್ತು ಜೀವ ಉಳಿಸುವ ವೃತ್ತಿಯ ಬಗ್ಗೆ ನಿಜವಾದ ಪ್ರೀತಿಯನ್ನು ಪ್ರದರ್ಶಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಶ್ಲ್ಯಾಘಿಸಿದೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!