ಬಾಬಾ ರಾಮ್‌ದೇವ್ ಯೂಟರ್ನ್: ವೈದ್ಯರು ಭೂಲೋಕ ದೇವಧೂತರು – ನಾನು ಲಸಿಕೆ ಪಡೆಯುತ್ತೇನೆ!

ನವದೆಹಲಿ: ತಮಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೋವಿಡ್ ಲಸಿಕೆಯ ಅಗತ್ಯವಿಲ್ಲ ಎಂದು ಹೇಳಿ ವೈದ್ಯ ಲೋಕದ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಇದೀಗ ಯೂ ಟರ್ನ್ ಹೊಡೆದಿದ್ದು, ‘ವೈದ್ಯರು ಭೂಲೋಕದ ದೇವಧೂತರು, ನಾನೂ ಕೂಡ ಶೀಘ್ರದಲ್ಲೇ ಲಸಿಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ವೈದ್ಯರ ವಿರುದ್ಧದ ಹೇಳಿಕೆಯಿಂದಾಗಿ ವೈದ್ಯ ಲೋಕದ ತೀವ್ರ ವಿರೋಧ ಎದುರಿಸುತ್ತಿರುವ ಬಾಬಾ ರಾಮ್ ದೇವ್, ಇದೀಗ ಶೀಘ್ರದಲ್ಲೇ ತಾವು ಕೋವಿಡ್ ಲಸಿಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವೇಳೆ ವೈದ್ಯರನ್ನು ಭೂಮಿ ಮೇಲಿನ ದೇವದೂತರು ಎಂದು ಶ್ಲಾಘಿಸಿದ್ದಾರೆ.

ಇದೇ ವೇಳೆ ತಮ್ಮ ವಿರುದ್ಧ ಭುಗಿಲೆದ್ದಿರುವ ವಿವಾದಗಳ ಕುರಿತು ಸ್ಪಷ್ಟನೆ ನೀಡಲು ಯತ್ನಿಸಿದ ಬಾಬಾ ರಾಮ್ ದೇವ್, ನಾನು ಯಾವುದೇ ಸಂಸ್ಥೆಯ ವಿರುದ್ಧ ಅಲ್ಲ. ಉತ್ತಮ ವೈದ್ಯರು ನಮಗೆ ಸಿಕ್ಕ ವರ. ಅವರು ಭೂಮಿ ಮೇಲಿನ ದೇವದೂತರು. ಆದರೆ ಇದೇ ವೈದ್ಯ ಲೋಕದ ಕೆಲವರು ಸ್ವಹಿತಾಸಕ್ತಿ ರಕ್ಷಣೆಗಾಗಿ ತಪ್ಪುಗಳನ್ನು ಮಾಡುತ್ತಿದ್ದಾರೆ. ಔಷಧದ ಹೆಸರಲ್ಲಿ ಅಮಾಯಕ ಜನರನ್ನು ಶೋಷಣೆ ಮಾಡುತ್ತಿದ್ದಾರೆ. ಇಂತಹ ವೈದ್ಯರ ವಿರುದ್ಧವೇ ನನ್ನ ಹೋರಾಟ. ಕೆಲ ವೈದ್ಯರು ರೋಗಿಗಳಿಗೆ ದುಬಾರಿ ಔಷಧಿಗಳನ್ನು ಬರೆದುಕೊಡುತ್ತಿದ್ದಾರೆ. ಇದರಿಂದ ಸಾಕಷ್ಟು ರೋಗಿಗಳು ಆರ್ಥಿಕ ಮುಗ್ಗಟ್ಟಿಗೆ ಈಡಾಗುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅಗ್ಗದ ಔಷಧಿಗಳು ದೊರೆಯುವ ಐತಿಹಾಸಿಕ ಜನೌಷಧ ಕೇಂದ್ರಗಳನ್ನು ಸ್ಥಾಪಿಸಬೇಕಾಯಿತು ಎಂದು ಹೇಳಿದರು.

ತುರ್ತುಸೇವೆ ಮತ್ತು ಶಸ್ತ್ರಚಿಕಿತ್ಸೆಗಳಿಗೆ ಅಲೋಪತಿ ಉತ್ತಮ:

ಇದೇ ವೇಳೆ ತುರ್ತುಸೇವೆ ಮತ್ತು ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ಅಲೋಪತಿ ಉತ್ತಮ ಎಂದು ಹೇಳಿದ ಬಾಬಾ ರಾಮ್ ದೇವ್, ಯೋಗ, ಆಯುರ್ವೇದ ಜೊತೆಗೇ ಎರಡೂ ಡೋಸ್ ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಳ್ಳಿ.. ಇದು ನಿಮ್ಮ ದೇಹವನ್ನು ಕೊರೋನಾ ವೈರಸ್ ವಿರುದ್ಧದ ರಕ್ಷಣಾ ಕೋಟೆಯನ್ನಾಗಿ ಮಾರ್ಪಡಿಸುತ್ತದೆ. ಆಗ ಒಂದೇ ಒಂದು ಸಾವು ಕೂಡ ಕೋವಿಡ್ ವೈರಸ್ ನಿಂದ ಸಂಭವಿಸದು ಎಂದು ಹೇಳಿದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ...
Translate »
error: Content is protected !!