ಐ.ಎಂ.ಎ ವಂಚನೆ: ರೋಶನ್ ಬೇಗ್ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಗಡುವು!

ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ 2 ತಿಂಗಳ ಹಿಂದೆ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಆಸ್ತಿ ಜಪ್ತಿ ಪ್ರಕ್ರಿಯೆ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಗಡುವು ನೀಡಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನವನ್ನು ನೀಡಿದೆ.

ಅರ್ಜಿ ವಿಚಾರಣೆಗೆ ಬಂದಾಗ ರೋಷನ್ ಬೇಗ್ ಆಸ್ತಿ ಜಪ್ತಿ ವಿಚಾರದಲ್ಲಿ ಯಾವೆಲ್ಲಾ ಕ್ರಮ ಜರುಗಿಸಲಾಗಿದೆ ಎಂದು ನ್ಯಾಯಾಪೀಠ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಲಾಕ್ಡೌನ್ ಇದ್ದ ಕಾರಣ ರೋಷನ್ ಬೇಗ್ ಅವರ ಆಸ್ತಿ ಜಪ್ತಿ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದರು ಹೇಳಿದರು.

ಈ ಕಾರಣವನ್ನು ಒಪ್ಪದ ನ್ಯಾಯಪೀಠ, ಲಾಕ್’ಡೌನ್’ಗೂ, ಆಸ್ತಿ ಜಪ್ತಿ ಮಾಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ ಎಂದು ಖಾರವಾಗಿ ಪ್ರಶ್ನಿಸಿತು.

ಈ ನಡುವೆ ಸಿಬಿಐ ಪರ ವಾದಿಸಿದ ವಕೀಲ ಪಿ. ಪ್ರಸನ್ನ ಕುಮಾರ್‌, ‘ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ರ್ಪೂಣಗೊಂಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಮಾಜಿ ಸಚಿವ ರೋಷನ್‌ ಬೇಗ್‌ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ ಹಾಗೂ ಆರೋಪಪಟ್ಟಿ ರದ್ದುಪಡಿಸಿ ಏಕಸದಸ್ಯ ಪೀಠ ನೀಡಿರುವ ಆದೇಶ ಸುಪ್ರೀಂನಲ್ಲಿ ಪ್ರಶ್ನಿಸಲಾಗುವುದು. ಮತ್ತೊಬ್ಬ ಐಪಿಎಸ್‌ ಅಧಿಕಾರಿ ಅಜಯ್‌ ಹಿಲೋರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಕೋರಿ ಸರಕಾರಕ್ಕೆ ಶ್ರೀಘ್ರವೇ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ...
Translate »
error: Content is protected !!