ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್’ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್’ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು ತಗ್ಗಿಸಲು ಕಠಿಣ ಕ್ರಮ ಜಾರಿಗೆ ತರಲು ದಕ್ಷಿಣ ಕನ್ನಡದ ಜಿಲ್ಲಾಡಳಿತ ನಿರ್ಧರಿಸಿದೆ.

ಈ ಸಂಬಂಧ ಡಿಸಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಹಿಸಿದ್ದರು.

ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿ ಪೂಜಾರಿ, “ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ನಿರೀಕ್ಷೆಯಂತೆ ಕಡಿಮೆಯಾಗುತ್ತಿಲ್ಲ. ಸೋಂಕಿನ ಪ್ರಮಾಣವನ್ನು ತಗ್ಗಿಸಲು ಎಲ್ಲಾ ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವ ಅಗತ್ಯವಿದೆ. ” ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, “ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚು ಇದ್ದರೂ ಜನರು ಯಾವುದೇ ಭಯವಿಲ್ಲದೆ ಓಡಾಡುತ್ತಿದ್ದಾರೆ. ಜನರು ಜಾಗೃತರಾಗಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದರೆ ಪಾಸಿಟಿವ್ ಸಂಖ್ಯೆಯನ್ನು ತಗ್ಗಿಸಲು ಸಾಧ್ಯವಿದೆ. ” ಎಂದರು.

ಜಿಲ್ಲಾಧಿಕಾರಿ (ಡಿಸಿ) ಡಾ.ರಾಜೇಂದ್ರ ಕೆ ವಿ, “ಇದೀಗ ಜಾರಿಯಲ್ಲಿರುವ ಯಾವುದೇ ನಿರ್ಬಂಧಗಳನ್ನು ಸಡಿಲಿಸಿದರೆ ಸೋಂಕಿನ ಪ್ರಮಾಣವನ್ನು ನಿಯಂತ್ರಣಕ್ಕೆ ತರುವುದು ಕಷ್ಟವಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಉಪಕರಣಗಳು, ಲ್ಯಾಬ್ ತಂತ್ರಜ್ಞರು ಮತ್ತು ವಾಹನಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ” ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್ ಮಾತನಾಡಿ, “ಮನೆಯಲ್ಲಿ ಪ್ರತ್ಯೇಕತೆಗೆ ಒಳಗಾದವರ ಮನೆಗಳನ್ನು ಸಿಲ್’ಡೌನ್ ಮಾಡಲಾಗುತ್ತಿದೆ. ಕೆಲವು ಹಳ್ಳಿಗಳ ಪಂಚಾಯತ್ ಪ್ರತಿನಿಧಿಗಳು ಸ್ವಯಂಪ್ರೇರಣೆಯಿಂದ ಮುಂದೆ ಬರುತ್ತಿದ್ದಾರೆ ಮತ್ತು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಕೇಳಿಕೊಳ್ಳುತ್ತಿದ್ದಾರೆ.

ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೋಟಿಯನ್, ರಾಜೇಶ್ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರ ನಿಗಮದ ಆಯುಕ್ತ ಅಕ್ಷಿ ಶ್ರೀಧರ್, ಎಸ್.ಪಿ. ಹೃಕ್ಷಿಕೇಶ್ ಸೋನವಾನೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ನಾ ಅಮ್ಮೆಂಬಾಲಾ, ಡಿಸಿಪಿ ಹರಿರಾಮ್ ಶಂಕರ್, ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.

ಸೂಚನೆಗಳನ್ನು ನೀಡುತ್ತಾ ಮಾತನಾಡಿದ ಕೋಟ ಶ್ರಿನಿವಾಸ್ ಪೂಜಾರಿ, “ಹೆಚ್ಚಿನ ಪ್ರಮಾಣದ ಸೋಂಕನ್ನು ಹೊಂದಿರುವ ಹಳ್ಳಿಗಳು ಮತ್ತು ಪಟ್ಟಣಗಳ ಪ್ರದೇಶಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೆ ತರಬೇಕಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಸೋಂಕಿತರ ಮನೆಗಳನ್ನು ಲಾಕ್ ಮಾಡಬೇಕು. ಐದುಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗಿದ್ದರೆ, ಆ ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಬೇಕಾಗುತ್ತದೆ.

ಜಿಲ್ಲೆಯ ಪಟ್ಟಣ ಪ್ರದೇಶಗಳಾದ ಉಲ್ಲಾಳ, ಸೋಮೇಶ್ವರ, ಕೋಟೆಕರ್ ಮತ್ತು ಬೆಳ್ತಂಗಡಿಯ 40 ಗ್ರಾಮಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು. ಈ ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗುತ್ತದೆಂದು ಹೇಳಿದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ...
Translate »
error: Content is protected !!