ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ ನಾಯಕರ ನೇರ ಕೈವಾಡ ಇರುವುದು ತಿಳಿದು ಬಂದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷ ಸಂಕಪ್ಪ ಎ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಕೋಟದಲ್ಲಿ ನಡೆದ ಅವಳಿ ಕೊಲೆ ಪ್ರಕರಣ, ಬ್ರಹ್ಮಾವರದ ಪ್ರವೀಣ್ ಪೂಜಾರಿ ಕೊಲೆ ಪ್ರಕರಣಗಳಲ್ಲಿಯೂ ಬಿಜೆಪಿ ನಾಯಕರು ನೇರವಾಗಿ ಭಾಗಿಯಾಗಿರುವುದು, ಮಾತ್ರವಲ್ಲದೆ ಹಿಂದುಳಿದ ಸಮಾಜದ ಯುವಕರನ್ನೇ ಕೊಲೆ ಮಾಡಿರುವುದು ಖಂಡನೀಯ. ಇಂತಹ ಪ್ರಕರಣಗಳು ಮರು ಕಳಿಸದಂತೆ ಬಿಜೆಪಿ ನಾಯಕರು ಮಾತ್ರವಲ್ಲದೆ ಪೊಲೀಸ್ ಇಲಾಕೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಪಕ್ಷಾತೀತವಾಗಿ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಉದಯ ಗಾಣಿಗ ಕೊಲೆ ಕೃತ್ಯದಲ್ಲಿ ಭಾಗಿಯಾದ ಎಲ್ಲರ ಮೇಲೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಕೊಲೆ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಂಡರೆ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸಲಾರವು. ಮಾತ್ರವಲ್ಲದೆ ಕೊಲೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಶಿಕ್ಷೆಯಾದರೆ ಮಾತ್ರ ಉದಯ ಗಾಣಿಗರ ಪತ್ನಿ ಮತ್ತು ಮಕ್ಕಳಿಗೆ ನ್ಯಾಯ ಸಿಕ್ಕಂತಾಗುತ್ತದೆ.

ಕೊಲೆ ನಡೆದ ಕೆಲವೇ ಗಂಟೆಗಳ ಒಳಗೆ ಜಿಲ್ಲೆಯ ಪೊಲೀಸ್ ಇಲಾಖೆ ತಪ್ಪಿತಸ್ಥ ಆರೋಪಿಗಳನ್ನು ವಶಕ್ಕೆ ಪಡೆದಿರುವುದು ಶಾಘ್ಲನೀಯ. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕ ಗಳ ಪರವಾಗಿ ಪೊಲೀಸ್ ಇಲಾಖೆಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದು ಆರೋಪಿಗಳಿಗೆ ರಕ್ಷಣೆ ನೀಡದೆ, ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು ಮತ್ತು ಉದಯ ಗಾಣಿಗರ ಪತ್ನಿ ಮತ್ತು ಮಕ್ಕಳಿಗೆ ಸರಕಾರ ದಿಂದ ಉದ್ಯೋಗ ಹಾಗೂ ಗರಿಷ್ಠ ಪರಿಹಾರ ನೀಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸಂಕಪ್ಪ ಎ ಮನವಿ ಮಾಡಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

Translate »
error: Content is protected !!