ಕಿರಣ್ ರಾವ್’ಗೆ ವಿಚ್ಚೇದನ ನೀಡಿದ ಅಮೀರ್ ಖಾನ್; ಪ್ರೀತಿ ವಿಶ್ವಾಸದಿಂದ ಇರುತ್ತೇವೆ!

ಮುಂಬೈ: ಬಾಲಿವುಡ್ ನ ‘ಪರ್ಫೆಕ್ಷನಿಸ್ಟ್’ ನಟ ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ಗೆ ವಿಚ್ಛೇದನ ನೀಡಿದ್ದಾರೆ.

ಈ ಬಗ್ಗೆ ಇಬ್ಬರೂ ಜಂಟಿ ಹೇಳಿಕೆ ಹೊರಡಿಸಿದ್ದು 15 ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ನಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸುತ್ತಿದ್ದು ಇನ್ನು ಮುಂದೆ ಪತಿ-ಪತ್ನಿಯಾಗಿ ಇರುವುದಿಲ್ಲ, ನಮ್ಮ ಪುತ್ರನಿಗೆ ಪೋಷಕರಾಗಿ ಮುಂದುವರಿಯುತ್ತೇವೆ, ಪುತ್ರನ ಪೋಷಕರಾಗಿ ನಮ್ಮ ಸಹಕಾರ, ಪ್ರೀತಿ-ವಿಶ್ವಾಸ ಮುಂದುವರಿಯಲಿದೆ ಎಂದು ಹೇಳಿಕೊಂಡಿದ್ದಾರೆ.

ಈ ಮೂಲಕ ಅಮೀರ್ ಖಾನ್ ಅವರ ಎರಡನೇ ವೈವಾಹಿಕ ಜೀವನವೂ ಮುರಿದು ಹೋದಂತಾಗಿದೆ. ಅಮೀರ್ ಖಾನ್ ಮತ್ತು ಕಿರಣ್ ರಾವ್ ಲಗಾನ್ ಚಿತ್ರದ ಚಿತ್ರೀಕರಣ ವೇಳೆ ಆಪ್ತರಾಗಿ ಪ್ರೀತಿಸಿ 2005ರಲ್ಲಿ ವಿವಾಹವಾಗಿದ್ದರು. ಅವರಿಗೆ ಆಜಾದ್ ಎಂಬ ಮಗನಿದ್ದಾನೆ.

ಇದಕ್ಕೂ ಮುನ್ನ ಅಮೀರ್ ಖಾನ್ 1986ರಲ್ಲಿ ರೀನಾ ದತ್ತರನ್ನು ಮದುವೆಯಾಗಿ ಇಬ್ಬರು ಮಕ್ಕಳನ್ನು ಪಡೆದು 2002ರಲ್ಲಿ ವಿಚ್ಛೇದನ ಪಡೆದಿದ್ದರು.

”ನಾವು ಸ್ವಲ್ಪ ಸಮಯದ ಹಿಂದೆಯೇ ಯೋಜಿಸಿ ಪ್ರತ್ಯೇಕವಾಗುವ ಬಗ್ಗೆ ತೀರ್ಮಾನ ತೆಗೆದುಕೊಂಡೆವು. ಈಗ ಅದನ್ನು ಔಪಚಾರಿಕವಾಗಿ ಅಧಿಕೃತವಾಗಿ ತಿಳಿಸುತ್ತಿದ್ದೇವೆ. ಪತಿ-ಪತ್ನಿ ದಾಂಪತ್ಯ ಸಂಬಂಧದಲ್ಲಿ ಬೇರೆಯಾದರೂ ಕೂಡ ಮಗ ಆಜಾದ್ ನ ಬೆಳವಣಿಗೆಗೆ ನಮ್ಮ ಪ್ರೀತಿ-ಕಾಳಜಿ ಹಿಂದಿನಂತೆಯೇ ಮುಂದುವರಿಯಲಿದೆ. ಆತನನ್ನು ಒಟ್ಟಿಗೆ ಪೋಷಿಸಿ, ಬೆಳೆಸುತ್ತೇವೆ. ಉಳಿದಂತೆ ಸಿನೆಮಾ, ಪಾನಿ ಫೌಂಡೇಶನ್ ಮತ್ತು ಇತರ ಯೋಜನೆಗಳಲ್ಲಿ ಸಾಮಾಜಿಕ ಕೆಲಸ-ಕಾರ್ಯಗಳು ಸಹಯೋಗದಿಂದ ಮುಂದುವರಿಸಲಿದ್ದೇವೆ” ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...
Translate »
error: Content is protected !!