ಆಗಸ್ಟ್ 5 ರಂದು ಕೊಳ್ಳೇಗಾಲ ಶಾಸಕ ಏನ್. ಮಹೇಶ್ ಬಿಜೆಪಿ ಸೇರ್ಪಡೆ

ಚಾಮರಾಜನಗರ,(ಆ.03); ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್‌ ಬಿಜೆಪಿ ಸೇರಲಿದ್ದಾರೆ.

ಆಗಸ್ಟ್ 5ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ಎನ್. ಮಹೇಶ್ ಬಿಜೆಪಿಗೆ ಸೇರಲಿದ್ದಾರೆ. ಕೋವಿಡ್ ಪರಿಸ್ಥಿತಿ ಬಳಿಕ ಚಾಮರಾಜನಗರದಲ್ಲಿ ದೊಡ್ಡ ಸಮಾವೇಶವನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ.

ಎನ್. ನಂಜುಡಸ್ವಾಮಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸೇರುವ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜುಲೈ 30ರಂದು ಗುಂಡ್ಲುಪೇಟೆಗೆ ಭೇಟಿ ನೀಡಿದ ಸಮಯದಲ್ಲಿ ಪಕ್ಷ ಸೇರುವಂತೆ ಎನ್. ಮಹೇಶ್‌ಗೆ ಸೂಚನೆ ನೀಡಿದ್ದರು.

ಎನ್. ಮಹೇಶ್ ಪಕ್ಷ ಸೇರುವ ವಿಚಾರದಲ್ಲಿ ನನಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷನಾಗಿ ಬೇರೆ ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ಬೇರೆ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದೇನೆ. ಈಗ ನಮ್ಮ ಕ್ಷೇತ್ರದ ಶಾಸಕರು ಸಹ ಬಿಜೆಪಿ ಸೇರುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಯಾರಿಗೆ ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಚುನಾವಣೆಗೆ ಇನ್ನೂ ಎರಡು ವರ್ಷಗಳು ಇವೆ” ಎಂದು ಜಿ. ಎನ್. ನಂಜುಡಸ್ವಾಮಿ ಹೇಳಿದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜನಗರದ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್. ಮಹೇಶ್‌ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಬಿಎಸ್‌ಪಿ ರಾಜ್ಯದಲ್ಲಿ ಚುನಾವಣೆ ಎದುರಿಸಿತ್ತು. 71,792 ಮತಗಳನ್ನು ಪಡೆದು ಎನ್. ಮಹೇಶ್ ಗೆಲುವು ಸಾಧಿಸಿದ್ದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಗೆದ್ದು ಶಾಸಕರಾಗಿದ್ದರು. ಪಕ್ಷದ ವರಿಷ್ಠೆ ಮಾಯಾವತಿ ಸಹ ಎನ್. ಮಹೇಶ್ ಅಭಿನಂದಿಸಿದ್ದರು. ಈಗ ಎನ್. ಮಹೇಶ್ ಬಿಜೆಪಿ ಸೇರುತ್ತಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾಸರಗೋಡು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ,ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕಾಸರಗೋಡು,(ಸೆ.24): ಬೈಕ್‌‌ಗಳ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕೆಎಸ್‌‌ಇಬಿ ನೌಕರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ ನಡೆದಿದೆ.ಮೃತ ಪಟ್ಟವರನ್ನು ಕುಂಬಳೆ ಕಚೇರಿಯ ನೌಕರ ರತೀಶ್ (43)...
Translate »
error: Content is protected !!