ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆ.16 ವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಅವಧಿಯಲ್ಲಿ ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸಳಾಂತರಿಸಲು ಅನುಮತಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಥೆಯಿಂದ ನೀಡಲಾದಸೂಕ್ತ ಗುರುತಿನ ಚೀಟಿ/ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸಬಹುದಾಗಿದೆ.

ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನುತಮ್ಮ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪೆನಿ/ ಸಂಸ್ಥೆ ( IT and ITes companies organization) ಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂಕಾರ್ಮಿಕರನ್ನು ಹೊರತುಪಡಿಸಿ ಇತರ ಸಿಬ್ಬಂದಿ ಹಾಗೂ ಕೆಲಸಗಾರರು ಮನಗಳಲ್ಲಿಯೇ ಕಾರ್ಯನಿರ್ವಹಿಸಲು ಸೂಚಿಸುವುದು.ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಬಹುದು. ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.

ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರ ಸರಕು ಸಾಗಾಟ ವಾಹನಗಳು, ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ, ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಲಸಲಾಗಿದೆ. ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ,ರೈಲ್ವೆ ನಿಲ್ದಾಣಕ್ಕೆ, ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದೆ. ಈ ವೇಳೆ ಪ್ರಯಾಣ ಮಾಡುವ ಸಂಧರ್ಭದಲ್ಲಿಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

Translate »
error: Content is protected !!