ಅವರ ಗೆದ್ದ ಪದಕವು ನಮ್ಮ ಗ್ರಾಮಕ್ಕೆ ಸೂಕ್ತ ವಿದ್ಯುತ್ ಸೌಲಭ್ಯ ಮತ್ತು ರಸ್ತೆಯನ್ನು ಒದಗಿಸಬಹುದೆಂಬ ನಿರೀಕ್ಷೆಯಿದೆ – ರವಿದಾಹಿಯ ತಂದೆ

ಹರ್ಯಾಣ: 23 ವರ್ಷದ ರವಿ ದಹಿಯಾ, 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಕ್ರೀಡಾ ಇತಿಹಾಸದಲ್ಲಿ ಅವರು ಆರು ಕ್ರೀಡಾಪಟುಗಳಲ್ಲಿ ಒಬ್ಬರಾಗಿ ದೇಶವು ಅವರ ಯಶಸ್ಸನ್ನು ಆಚರಿಸಿದರೆ, ದಹಿಯಾ ಅವರ ಹಳ್ಳಿಯ ಜನರು ಅವರ ಗೆಲುವು ಊರಿಗೆ ಮನ್ನಣೆ ಮತ್ತು ಅಭಿವೃದ್ಧಿಯನ್ನು ತರುತ್ತದೆ ಎಂಬ ಭರವಸೆಯನ್ನು ಮುಂದಿಟ್ಟಿದೆ.

ದಹಿಯಾ ಹರಿಯಾಣದ ನಹ್ರಿಯ ಎಂಬ ಹಳ್ಳಿಯಿಂದ ಬಂದವರು. ಅವರು 2019 ರಲ್ಲಿ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ನಂತರ, ಅವರ ಹಳ್ಳಿಯ ನಿವಾಸಿಗಳು ಅಭಿವೃದ್ಧಿಯ ನಿರೀಕ್ಷೆಯಲ್ಲಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಸುಮಾರು 15,000 ಜನರಿರುವ ನಹ್ರಿ ಗ್ರಾಮವು ದಿನಕ್ಕೆ ಕೇವಲ 8 ಗಂಟೆಗಳ ವಿದ್ಯುತ್ ಸೌಲಭ್ಯ ಹೊಂದಿದೆ. ಗ್ರಾಮಕ್ಕೆ ಬೆಳಿಗ್ಗೆ ಎರಡು ಗಂಟೆಗಳ ಕಾಲ ಮತ್ತು ಸಂಜೆ ಆರು ಗಂಟೆಗಳ ಕಾಲ ವಿದ್ಯುತ್ ಸೌಲಭ್ಯ ಒದಗಿಸಲಾಗುತ್ತಿದೆ.

ಒಲಿಂಪಿಕ್ಸ್‌ನಲ್ಲಿ ರವಿ ಅವರ ಪಂದ್ಯಗಳನ್ನು ವೀಕ್ಷಿಸಲು ವಿಶೇಷವಾಗಿ ಮಧ್ಯಾಹ್ನ ಸೆಮಿಫೈನಲ್ ಪಂದ್ಯವನ್ನು ವೀಕ್ಷಿಸಲು ಸ್ಥಳೀಯ ಆಡಳಿತವು ಗ್ರಾಮಕ್ಕೆ ನಿರಂತರ ವಿದ್ಯುತ್ ಪೂರೈಕೆಯನ್ನು ಖಾತ್ರಿಪಡಿಸಿತು. ಆದ್ದರಿಂದ ಅವರು ನೇರ ಅವರ ಒಲಿಂಪಿಕ್ಸ್ ಸಾಧನೆಯ ಕ್ಷಣಗಳನ್ನು ನೇರ ಪ್ರಸಾರದಲ್ಲಿ ಗ್ರಾಮಸ್ಥರು ವೀಕ್ಷಿಸಿದರು.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರವಿ ದಹಿಯಾ ಅವರ ತಂದೆ ರಾಕೇಶ್, “ಅಬ್ ಲಗ್ತಾ ಹೈ ಬಿಜ್ಲಿ ಕಿ ಸಮಸ್ಯ ದೂರ್ ಹೋ ಜಾಯೇಗಿ, ಪಾನಿ ಭೀ ಆ ಜಾಯೇಗಾ (ನಮ್ಮ ವಿದ್ಯುತ್ ಮತ್ತು ನೀರಿನ ಸಮಸ್ಯೆಗಳು ಈಗ ಬಗೆಹರಿಯುತ್ತವೆ ಎಂದು ತೋರುತ್ತದೆ)” ಎಂದು ಹೇಳಿದ್ದಾರೆ.

“ಅವನ ಪದಕವು 24×7 ವಿದ್ಯುತ್ ಸರಬರಾಜು ಮತ್ತು ಗ್ರಾಮಕ್ಕೆ ಸರಿಯಾದ ರಸ್ತೆ ಸೌಲಭ್ಯ ಒದಗಿಸಲಿದೆ ಎಂದು ನಾನು ಭಾವಿಸುತ್ತೇನೆ. ನನ್ನ ಮಗನ ಪದಕಗಳು ಹಳ್ಳಿಗೆ ಅಭಿವೃದ್ಧಿಯನ್ನು ತರುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆಂದು ಹೇಳಿದರು.

ಲೊವ್ಲಿನಾ ಬೊರ್ಗೊಹೈನ್ ಒಲಿಂಪಿಕ್ಸ್‌ನಲ್ಲಿ ತನ್ನ ಕಂಚಿನ ಪದಕವನ್ನು ಗೆದ್ದ ನಂತರ, ಅಸ್ಸಾಂ ಸರ್ಕಾರವು ಆಕೆಯ ಗ್ರಾಮವಾದ ಗೋಲಘಾಟ್ ಜಿಲ್ಲೆಯ ಬರೋಮುಖಿಯಾಲ್ಲಿ ರಸ್ತೆ ಕಾಂಕ್ರಿಟೀಕರಣ ನಡೆಸುವ ಕುರಿತು ಭರವಸೆ ನೀಡಿತ್ತು.

ಏತನ್ಮಧ್ಯೆ, ನಹರಿ ಹಳ್ಳಿಯ ಅಭಿವೃದ್ಧಿಗೆ ಇದೇ ರೀತಿಯ ಘೋಷಣೆಯನ್ನು ಹರಿಯಾಣ ಸರ್ಕಾರದಿಂದ ನಿರೀಕ್ಷಿಸಲಾಗಿದೆ. ಮತ್ತು ಹತ್ತಿರದ ಆಸ್ಪತ್ರೆ ಸೋನಿಪತ್‌ನಲ್ಲಿರುವುದರಿಂದ ಈ ಗ್ರಾಮವು ಸರ್ಕಾರಿ ಆಸ್ಪತ್ರೆಯ ದೀರ್ಘಾವಧಿಯ ಬೇಡಿಕೆಯನ್ನು ಕೂಡ ಹೊಂದಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ.1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...
Translate »
error: Content is protected !!