ಅಫ್ಗಾನ್ ನ ಅಸ್ಥಿರತೆ ಭಯೋತ್ಪಾದಕ ಸಿದ್ಧಾಂತಗಳಿಗೆ ಹುರಿದುಂಬಿಸುತ್ತದೆ : ಪ್ರಧಾನಿ ಮೋದಿ

ನವದೆಹಲಿ: ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆ ದೇಶದ ಪರಿಸ್ಥಿತಿಯು ಭಾರತದಂತಹ ನೆರೆಯ ರಾಷ್ಟ್ರಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಮತ್ತು ಅದಕ್ಕಾಗಿಯೇ ಈ ವಿಚಾರದ ಮೇಲೆ ಗಮನಹರಿಸುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಮುಂಬರುವ ಸರ್ಕಾರದಲ್ಲಿ ಎಲ್ಲ ಸಮಾಜಗಳ ವರ್ಗಗಳ ಪ್ರಾತಿನಿಧ್ಯ ಮುಖ್ಯ ಎಂದು ಮೋದಿ ಪ್ರತಿಪಾದಿಸಿದ್ದಾರೆ. ಇಂತಹ ಹೊಸ ವ್ಯವಸ್ಥೆ ಗುರುತಿಸುವ ಕೆಲಸವನ್ನು ಅಂತಾರಾಷ್ಟ್ರೀಯ ಸರ್ಕಾರ ಮಾಡಬೇಕಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. ಅಫ್ಘಾನಿಸ್ತಾನದ ವಿಚಾರವಾಗಿ ವಿಶ್ವಸಂಸ್ಥೆಯ ಪಾತ್ರ ಬೆಂಬಲಿಸಿದ ಮೋದಿ, ಆ ದೇಶದಲ್ಲಿ ಅಸ್ಥಿರತೆ ಮತ್ತು ಮೂಲಭೂತವಾದ ಮುಂದುವರೆದರೆ ಅದು, ವಿಶ್ವದಾದ್ಯಂತ ಭಯೋತ್ಪಾದಕ ಸಿದ್ಧಾಂತಗಳನ್ನು ಮತ್ತು ಸಂಘಟನೆಗಳ ಹುಟ್ಟಿಗೆ ಕಾರಣವಾಗುತ್ತದೆ.

ಬೇರೆ ದೇಶಗಳೂ ಭಯೋತ್ಪಾದನೆ ಮೂಲಕ ಅಧಿಕಾರಕ್ಕೆ ಬರಲು ಪ್ರೇರಣೆ ನೀಡುತ್ತವೆ ಎಂದಿದ್ದಾರೆ. ಎಲ್ಲ ದೇಶಗಳು ಭಯೋತ್ಪಾದನೆಗೆ ಬಲಿಯಾಗಿವೆ, ಮತ್ತು ಆದ್ದರಿಂದ, ನಾವು ಒಟ್ಟಾಗಿ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಯ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಶಾಂಘೈ ಒಕ್ಕೂಟದ ರಾಷ್ಟ್ರಗಳು ಈ ಬಗ್ಗೆ ಕಟ್ಟುನಿಟ್ಟಾದ ನಿಯಮಗಳನ್ನು ರೂಪಿಸಬೇಕು ಎಂದಿದ್ದಾರೆ.

ಶಾಂಘೈ ಒಕ್ಕೂಟದಲ್ಲಿ ನಾವು ರೂಪಿಸುವ ನಿಯಮಗಳು ಜಾಗತಿಕವಾಗಿ ಭಯೋತ್ಪಾದಕ ನಿಗ್ರಹಕ್ಕೆ ಮಾದರಿಯಾಗಲೂಬಹುದು. ನಾವು ರೂಪಿಸುವ ನಿಯಮಗಳು ಭಯೋತ್ಪಾದನೆ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ಹೊಂದಿರಬೇಕೆಂದು ಮೋದಿ ಹೇಳಿದ್ದಾರೆ. ಇದರ ಜೊತೆಯಲ್ಲಿಯೇ ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದಂತೆ ಅನಿಯಂತ್ರಿತ ಡ್ರಗ್ಸ್, ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಮಾನವ ಕಳ್ಳಸಾಗಣೆ ಮುಂತಾದ ವಿಚಾರಗಳ ಬಗ್ಗೆಯೂ ಮೋದಿ ಶಾಂಘೈ ಸಹಕಾರ ಸಂಘಟನೆಯ ಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ.1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...
Translate »
error: Content is protected !!