ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ನಗರ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಉಳ್ಳಾಲ, ಸೆ.23: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಉಳ್ಳಾಲ ನಗರ ಸಮಿತಿಯ 2021-2023 ಸಾಲಿನ ನೂತನ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು, ಪಕ್ಷದ ಜಿಲ್ಲಾಧ್ಯಕ್ಷ ಅಡ್ವೊಕೇಟ್ ಸರ್ಫರಾಜ್ ರವರ ಉಸ್ತುವಾರಿಯಲ್ಲಿ ಚುನಾವಣೆ ಮೂಲಕ ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅದರಂತೆ, ವೆಲ್ಫೇರ್ ಪಕ್ಷದ ಉಳ್ಳಾಲ ನಗರ ಸಮಿತಿಯ ಅಧ್ಯಕ್ಷರಾಗಿ ಎ.ಕೆ. ತೌಸೀಫ್, ಉಪಾಧ್ಯಕ್ಷರಾಗಿ ರೋಹಿದಾಸ್, ಪ್ರಧಾನ ಕಾರ್ಯದರ್ಶಿಯಾಗಿ ಅಸ್ಗರ್ ಸಿ.ಎಚ್, ಖಜಾಂಚಿಯಾಗಿ ಹುಸೈನ್ ಸ್ಮಾರ್ಟ್ ಸಿಟಿ, ಜೊತೆ ಕಾರ್ಯದರ್ಶಿಯಾಗಿ ರಿಜ್ವಾನ್ ಚೆಂಬುಗುಡ್ಡೆ ಮತ್ತು ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿಹಾಬ್ ಕೋಡಿ ಆಯ್ಕೆಯಾದರು.

ತೊಕ್ಕೊಟ್ಟುವಿನಲ್ಲಿರುವ ಪಕ್ಷದ ಪ್ರಾದೇಶಿಕ ಕಚೇರಿಯಲ್ಲಿ ಆಯೋಜಿಸಿದ, ಕಾರ್ಯಕರ್ತರ ಚುನಾವಣೆಯ ನಂತರದ ಸರಳ ಸಮಾರಂಭಲ್ಲಿ ನೂತನ ಅಧ್ಯಕ್ಷರು ಮತ್ತು ಹೊಸ ಹೊಣೆಗಾರರಾಗಿ ನಿಯುಕ್ತರಾದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ವೆಲ್ಫೇರ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಫ್ ಕೋಟೆಕಾರ್, ಜಿಲ್ಲಾ ಖಜಾಂಚಿ ಮನ್ಸೂರ್ ಸಿ.ಎಚ್ ಹಾಗೂ ಪಕ್ಷದ ಉಳ್ಳಾಲ ನಗರ ಸಭಾ ವ್ಯಾಪ್ತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

Translate »
error: Content is protected !!