ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್ 31ರವರೆಗೆ ಹಮ್ಮಿಕೊಂಡಿದ್ದು ಇದರ ಪ್ರಯುಕ್ತ ಕರ್ನಾಟಕ ರಾಜ್ಯದಲ್ಲಿಯೂ ಹೊಸ ಸದಸ್ಯರ ನೋಂದಾವಣೆಯ ಪ್ರಕ್ರಿಯೆಯು ಅರಂಭಗೊಂಡಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡಾ ಹೊಸ ಸದಸ್ಯರ ಸೇರ್ಪಡೆ ಚಟುವಟಿಕೆ ತುಂಬಾ ಬಿರುಸಾಗಿಯೇ ಸಾಗುತ್ತಿದೆಯಂದು ಪಕ್ಷದ ಜಿಲ್ಲಾಧ್ಯಕ್ಷರಾಗಿರುವ ಅಡ್ವೋಕೇಟ್ ಸರ್ಫರಾಜ್ ರವರು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರ ಪ್ರಯುಕ್ತ ವೆಲ್ಫೇರ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿರುವ ಅಡ್ವೋಕೇಟ್ ತಾಹೀರ್ ಹುಸೇನ್ ರವರು ತನ್ನ ರಾಜ್ಯವ್ಯಾಪಿ ಪ್ರವಾಸವನ್ನು ಕೈಗೊಂಡಿದ್ದು, ಇದರ ಭಾಗವಾಗಿ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರು
ಬಹಳ ಅದ್ದೂರಿಯಾಗಿ ಸ್ವಾಗತಿಸಿದರು.

ಅದರಂತೆ ಪೂರ್ವಾಹ್ನ 10:30 ಕ್ಕೆ ನಗರದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದ್ದು, ಅದರಲ್ಲಿ ಮುಖ್ಯವಾಗಿ ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ, ಸೌಹಾರ್ದತೆ ಮತ್ತು ಸಾಮರಸ್ಯದಿಂದ ಬದುಕುವ ಜನರ ಶಾಂತಿ ಕದಡುವ ಕೆಲವಾರು ಘಟನೆಗಳು ಸಂಭವಿಸಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು ಮತ್ತು ಇಷ್ಟೊಂದು ಸಂದರ್ಭದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಹೊಣೆಯನ್ನು ಹೊಂದಿರುವ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಯವರು, ಚಾಲ್ತಿಯಲ್ಲಿರುವ ‘ನೈತಿಕ ಪೊಲೀಸ್ ಗಿರಿ’ ಎಂಬ ಹೆಸರಿನ, ತೀರಾ ಅನೈತಿಕ ಗೂಂಡಾಗಿರಿಯನ್ನೇ ಬೆಂಬಲಿಸಿದ ರೀತಿಯಲ್ಲಿನ, “ಕ್ರಿಯೆಗೆ ಪ್ರತಿಕ್ರಿಯೆ” ಎನ್ನುವ ಮೂಲಕ ಕ್ರಿಮಿನಲ್ ಗಳನ್ನು ಸಮರ್ಥಿಸಿದಂತಹ ಅವರ ಪತ್ರಿಕಾ ಹೇಳಿಕೆಯು ನಿಜಕ್ಕೂ ವಿಷಾದನೀಯ ಮಾತ್ರವಲ್ಲ ಪ್ರಜಾಪ್ರಭುತ್ವದ ವಿಪರ್ಯಾಸವಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆಯಿಂದ, ಸರಕು ಸಾಗಣೆ ವೆಚ್ಚವೂ ದುಬಾರಿಯಾಗಿದ್ದು, ಹೀಗೆ ಇಂದು ಆಹಾರ ವಸ್ತುಗಳು ಕೂಡಾ ತುಟ್ಟಿಯಾಗಿ ಒಟ್ಟಿನಲ್ಲಿ ಜನಸಾಮಾನ್ಯರು ತಮ್ಮ ದೈನಂದಿನ ಬದುಕು ಕಟ್ಟಿಕೊಳ್ಳಲು ಪಡುತ್ತಿರುವ ಬವಣೆಯನ್ನು ಕೇಳುವವರೇ ಇಲ್ಲದಂತಾಗಿದೆ. ಇಂದು ನಮ್ಮ ದೇಶದ ಪರಿಸ್ಥಿತಿ ಅದೊಂದು ವಿಧದ ಅಘೋಷಿತ ಸರ್ವಾಧಿಕಾರದ ನೆಲೆಯಲ್ಲಿದ್ದು ವಿಪಕ್ಷಗಳು ಕೂಡಾ ಇಂದು ನಾಮ ಮಾತ್ರವಾಗಿ ಉಳಿದಂತಹ ಸನ್ನಿವೇಶದಲ್ಲಿದೆ. ಇಂತಹ ಸಂದಿಗ್ಧತೆಯಲ್ಲಿ ದೇಶದ ಭವ್ಯ ಪರಂಪರೆಯೊಂದಿಗೆ ಸಾಮರಸ್ಯ ಸಾರುವ ಸಮಾಜವನ್ನು ಕಾಪಾಡಿಕೊಂಡು, ಪ್ರಜಾಪ್ರಭುತ್ವದ ಸಿದ್ದಾಂತದ ಉಳಿವಿಗಾಗಿ, ನಮ್ಮ ಪಕ್ಷವು ದೇಶದ ನಾಗರಿಕರಲ್ಲಿ ಮೌಲ್ಯಾಧಾರಿತ ರಾಜಕೀಯ ಜಾಗೃತಿಯನ್ನು ಮೂಡಿಸುವ ಸಲುವಾಗಿ ಅಸ್ತಿತ್ವಕ್ಕೆ ಬಂದಿದೆ ಎಂದವರು ಹೇಳಿದರಲ್ಲದೆ, ನಮ್ಮ ಪಕ್ಷವು ಸಮಾಜದ ಸರ್ವ ಜನಸಾಮಾನ್ಯರ ಮೂಲಭೂತ ಬೇಡಿಕೆಗಳಾದ, ಸರ್ವರಿಗೂ ಆರೋಗ್ಯ ಮತ್ತು ಶಿಕ್ಷಣ ಅಲ್ಲದೆ ಬಡತನ ಮುಕ್ತ ಮತ್ತು ಯಾವುದೇ ಬಗೆಯ ಮತೀಯ ವಾದಗಳಿಗೆ ವಿರುದ್ಧವಾಗಿರುವ, ಭೀತಿ ಮುಕ್ತ ದೇಶ ನಿರ್ಮಾಣಕ್ಕೆ, ಕಟಿಬದ್ಧವಾಗಿದೆ ಹಾಗೂ ಇದೀಗ ಅದಕ್ಕಾಗಿ ಪಕ್ಷವು ರಾಷ್ಟ್ರೀಯ ಮಟ್ಟದಲ್ಲಿಯೇ ಸದಸ್ಯತ್ವ ಸೇರ್ಪಡೆ ಅಭಿಯಾನವನ್ನು ಆರಂಭಿಸಿದೆ, ಆದ್ದರಿಂದ ಸಮಾಜದ ಎಲ್ಲಾ ವರ್ಗದ ಸಮಾನ ಮನಸ್ಕ ಜನರೂ ನಮ್ಮ ಸದಸ್ಯತ್ವ ಅಭಿಯಾನ ಕಾರ್ಯಾಗಾರದಲ್ಲಿ ಕೈ ಜೋಡಿಸಿರಿ, ಪಕ್ಷದ ಸದಸ್ಯತನ ಪಡೆಯುವ ಮೂಲಕ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ಮತ್ತು ಬೆಳೆಸಲು ಸಹಕರಿಸಿ ಎಂದು ಭಿನ್ನವಿಸಿಕೊಂಡರು.

ಅಪರಾಹ್ನ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿಯಿರುವ ಪಕ್ಷದ ಕಚೇರಿ ವೆಲ್ಫೇರ್ ಭವನದಲ್ಲಿ ಕಾರ್ಯಕರ್ತರ ಸಭೆಯ ನಂತರ, ಕಾರ್ಯಕರ್ತರ ವಾಹನ ಜಾಥಾದೊಂದಿಗೆ ರಾಜ್ಯಾಧ್ಯಕ್ಷರನ್ನು ತೆರೆದ ವಾಹನದಲ್ಲಿ ಪಕ್ಷದ ಉಳ್ಳಾಲ ನಗರ ಸಮಿತಿ ಕಛೇರಿ ಮತ್ತು ನಾಗರಿಕ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭಕ್ಕಾಗಿ ಕರೆತರಲಾಯಿತು. ಉಳ್ಳಾಲ ನಗರ ವ್ಯಾಪ್ತಿಯಲ್ಲಿರುವ ತೊಕ್ಕೊಟ್ಟು ಸಹಾರ ಆಸ್ಪತ್ರೆ ಬಳಿಯಲ್ಲಿನ ಹೈಲಾಂಡ್ ವಾಣಿಜ್ಯ ಸಂಕೀರ್ಣದ ಒಂದನೇ ಮಹಡಿಯಲ್ಲಿ, ವೆಲ್ಫೇರ್ ಪಕ್ಷದ ಉಳ್ಳಾಲ ನಗರ ಸಮಿತಿ ಕಛೇರಿ ಮತ್ತು ನಾಗರಿಕ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಅಲ್ಲಲ್ಲಿ ನಾಗರಿಕ ಸೇವಾ ಕೇಂದ್ರವನ್ನು ಸ್ಥಾಪಿಸಬೇಕಾದ ಅನಿವಾರ್ಯ ಬಂದಿರುವುದು ಸರ್ಕಾರದ ವೈಫಲ್ಯವಾಗಿದೆ, ಸರಕಾರದ ಸೌಲಭ್ಯಗಳು ಸರಳವಾಗಿ ನಾಗರಿಕರಿಗೆ ತಲುಪದಿರುವ ಕಾರಣ ಜನಸಾಮಾನ್ಯರು ಇಷ್ಟೊಂದು ಸೇವಾ ಕೇಂದ್ರದ ಮೊರೆ ಹೋಗುವ ಪರಿಸ್ಥಿತಿ ಎದುರಾಗಿರುವುದು ದುರಂತವಾಗಿದೆ, ಅದೇನಿದ್ದರೂ ಸದಾ ನಿಸ್ವಾರ್ಥ ಸಮಾಜ ಸೇವೆಯಲ್ಲಿ ನಿರತರಾಗಿರುವ ನಮ್ಮ ಪಕ್ಷದ ಉತ್ಸಾಹಿ ಯುವಕರ ತಂಡ ಹೀಗೊಂದು ಜನಸೇವಾ ಕಾರ್ಯಾಲಯಕ್ಕೆ ಇಲ್ಲಿ ಚಾಲನೆ ನೀಡಿರುವುದು ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಕಳೆದ ಕೋವಿಡ್ ಸಂಕಷ್ಟ ಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಮತ್ತು ಇತರ ಎಲ್ಲಾ ವಿಧದಲ್ಲೂ ನೆರವಾಗಿರುವುದಲ್ಲದೆ ನೂರಕ್ಕೂ ಅಧಿಕ ಕೋವಿಡ್ ಕಾರಣದಿಂದ ಮೃತರಾದವರ ಆಂತ್ಯಸಂಸ್ಕಾರವನ್ನು ನೆರವೇರಿಸುವಲ್ಲಿ ಮುತುವರ್ಜಿ ವಹಿಸಿದ ಕೊರೋನ ವಾರಿಯರ್ಸ್, ಸಾಮಾಜಿಕ ಕಾರ್ಯಕರ್ತರಾದ ಸೆಯ್ಯದ್ ಶಿಹಾಬುದ್ದೀನ್ ಮತ್ತು ಝಮೀರ್ ಅಹಮದ್ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯಾಧ್ಯಕ್ಷರಾದ, ಅಡ್ವಕೇಟ್ ಶ್ರೀ ತಾಹೀರ್ ಹುಸೇನ್ ಅಲ್ಲದೆ, ಉಪಾಧ್ಯಕ್ಷರಾದ ಶ್ರೀ ಶ್ರೀಕಾಂತ್ ಸಾಲ್ಯಾನ್, ರಾಜ್ಯ ಕಾರ್ಯದರ್ಶಿ ಶ್ರೀ ಮೊಹಿನ್ ಕಮರ್, ಶ್ರೀ ಎ. ಎಚ್.ಮಹ್ಮೂದ್, ಉದ್ಯಮಿ ಕೋಟೆಕಾರ್,ಶ್ರೀ ಅಬ್ದುಲ್ ಖಾದರ್ ಉದ್ಯಮಿ ತೊಕೊಟ್ಟು, ಪಕ್ಷದ ಜಿಲ್ಲಾಧ್ಯಕ್ಷ ಶ್ರೀ ಸರ್ಪರಾಜ್. ಜಿಲ್ಲಾ ವಕ್ತಾರ ಎಸ್. ಎಮ್. ಮುತ್ತಲಿಬ್ ಪಕ್ಷದ ಉಳ್ಳಾಲ ನಗರ ಸಮಿತಿಯ ಅಧ್ಯಕ್ಷ ತೌಸೀಫ್ ಉಳ್ಳಾಲ ಉಪಸ್ಥಿತರಿದ್ದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...
Translate »
error: Content is protected !!