ಹೂತ್ರೆ ಕೊಳೆತು ಹೋಗ್ತೇನೆ, ಸುಟ್ರೆ ಬೂದಿ ಆಗ್ತೀನಿ ನನ್ನ ಅಂಗಾಂಗ ದಾನ ಮಾಡಿ ಎಂದು ವಿಡಿಯೋಮಾಡಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಹಾಸನ(ಅ.26)ಸುಟ್ಟರೆ ಬೂದಿ ಆಗುತ್ತೇನೆ ಹಾಗೂ ಮಣ್ಣಲ್ಲಿ ಹೂತರೆ ದೇಹ ಕೊಳೆತು ಹೋಗುತ್ತದೆ.ಆದ್ದರಿಂದ ನನ್ನ ಅಂಗಾಂಗಗಳನ್ನು ದಾನ ಮಾಡಿ ಎಂದು ವಿಡಿಯೋ ಮಾಡಿ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸಂದೇಶ್ ಎಂದು ಗುರುತಿಸಲಾಗಿದೆ.ಇಂದಿನ ಶಿಕ್ಷಣ ವ್ಯವಸ್ಥೆ ಸರಿ ಇಲ್ಲ . ಮುಖ್ಯಮಂತ್ರಿ, ಕುಲಪತಿಗಳು, ಎಲ್ಲ ಪಕ್ಷದ ಗಣ್ಯರು ಈ ವ್ಯವಸ್ಥೆ ಬದಲಾವಣೆಗೆ ಬೆಂಬಲ ಕೊಡಬೇಕೆಂದು ಸಂದೇಶ್ ಮನವಿ ಮಾಡಿಕೊಂಡಿದ್ದಾನೆ. ವಿಡಿಯೋ ತುಂಬೆಲ್ಲ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗಬೇಕೆಂದು ಯುವಕ ಆತ್ಮಹತ್ಯೆಗೆ ಮುನ್ನ ಒತ್ತಾಯಿಸಿದ್ದಾನೆ. ಸೂಸೈಡ್ ಮುನ್ನ ವಿಡಿಯೋವನ್ನು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾನೆ.

ವಿಡಿಯೋದಲ್ಲಿ ಸ್ನೇಹಿತೆಯ ನೀಟ್ ಪರೀಕ್ಷಗೆ ಒಳ್ಳೆಯದಾಗಲಿ. ನಿನ್ನ ಗುರಿಗಳು ಎಲ್ಲವೂ ಸಾಕಾರವಾಗಲಿ ಎಂದು ಹಾರೈಸುತ್ತೇನೆ. ನಾನು ನಿನ್ನನ್ನು ಕೇವಲ ಸ್ನೇಹಿತೆಯಾಗಿ ನೋಡಿಲ್ಲ. ನಿನ್ನನ್ನು ಕುಟುಂಬದ ಸದಸ್ಯೆಯಂತೆ ನೋಡಿಕೊಂಡಿದ್ದೇನೆ.ನನ್ನ ಅಂತ್ಯಕ್ರಿಯೆ ಬಳಿಕ ಅಪ್ಪ-ಅಮ್ಮ ನೀವೂ ಧೈರ್ಯ ಕಳೆದುಕೊಳ್ಳದೇ ಯಾವುದೇ ಕೆಟ್ಟ ನಿರ್ಧಾರ ತೆಗೆದುಕೊಳ್ಳಬಾರದು. ಒಂದೆರಡು ಅನಾಥ ಮಕ್ಕಳನ್ನು ತಂದು ಸಾಕಿ ಬದಲಾವಣೆ ತಂದೆ ಮಾತ್ರ ಸಮಾಜ ಆತನನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ. ನಿಮ್ಮ ಕನಸನ್ನು ನಾನು ಈಡೇರಿಸಲು ಆಗುತ್ತಿಲ್ಲ ಎಂಬುದನ್ನು ಈ ವಿಡಿಯೋ ಮೂಲಕ ನನ್ನ ಅಭಿಪ್ರಾಯ ಹೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!