ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅನಾಹುತ : ಉಸಿರು ಕಟ್ಟಿ ನಾಲ್ವರು ಮೃತ್ಯು

ನವದೆಹಲಿ (ಅ.26): ರಾಷ್ಟ್ರರಾಜಧಾನಿ ನವದೆಹಲಿಯ ಸೀಮಾಪುರಿ ಪ್ರದೇಶದಲ್ಲಿನ ಮೂರು ಅಂತಸ್ತಿನ ಹಳೇಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳವಾರ(ಅಕ್ಟೋಬರ್ 26) ನಸುಕಿನ ವೇಳೆ ನಡೆದಿದೆ.

ಇಂದು ಮುಂಜಾನೆ 4ಗಂಟೆಗೆ ಈ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಇದೀಗ ಬೆಂಕಿಯ ಜ್ವಾಲೆ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿರುವುದಾಗಿ ಅಗ್ನಿಶಾಮಕದಳದ ಸಿಬಂದಿಗಳು ತಿಳಿಸಿದ್ದಾರೆ.ಮೂರು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯ ಕೋಣೆಯೊಂದರಲ್ಲಿ ನಾಲ್ವರ ಶವ ಸಿಕ್ಕಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಲ್ವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮೃತರನ್ನು 58 ವರ್ಷದ ಹೊರಿಲಾಲ್, ಪತ್ನಿ (55ವರ್ಷ) ರೀನಾ, 24ವರ್ಷದ ಪುತ್ರ ಆಶು ಹಾಗೂ 18 ವರ್ಷದ ಮಗಳು ರೋಹಿಣಿ ಎಂದು ಗುರುತಿಸಲಾಗಿದೆ. ಹೊರಿಲಾಲ್ ದಂಪತಿಯ ಮತ್ತೊಬ್ಬ ಪುತ್ರ ಅಕ್ಷಯ ಅಗ್ನಿಅವಘಡದಲ್ಲಿ ಬದುಕುಳಿದಿದ್ದು, ಆತ ಎರಡನೇ ಅಂತಸ್ತಿನಲ್ಲಿ ನಿದ್ದೆ ಮಾಡಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!