‘ಗದಗ ಕೃಷಿ ಇಲಾಖೆ ಜೆಡಿ’ ಮನೆಯಲ್ಲಿ 7 ಕೆಜಿ ಬಂಗಾರ,15 ಲಕ್ಷ ನಗದು ಪತ್ತೆ

ಗದಗ (ನ.25): ಭ್ರಷ್ಟಾಚಾರ ನಿಗ್ರಹ ದಳ, ಶಿವಮೊಗ್ಗ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಸರ್ಕಾರಿ ನೌಕರರಾದ ಟಿ. ಎಸ್.ರುದ್ರೇಶಪ್ಪ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಗದಗ ಜಿಲ್ಲೆ ರವರು ತನ್ನ ಬಲ್ಲ ಮೂಲಗಳಿಗಿಂತ ಅಸಮತೋಲನ ಆಸ್ತಿ ಹೊಂದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ, ಪೊಲೀಸ್ ಅಧೀಕ್ಷಕರು, ಎಸಿಬಿ, ಪೂರ್ವ ವಲಯ, ದಾವಣಗೆರೆ ರವರ ನೇತೃತ್ವದಲ್ಲಿ ಒಟ್ಟು 44 ಅಧಿಕಾರಿ ಹಾಗೂ ಸಿಬ್ಬಂದಿಗಳ 5 ತಂಡಗಳೊಂದಿಗೆ ಸರ್ಕಾರಿ ನೌಕರನಿಗೆ ಸೇರಿದ 5 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಲಾಗಿತ್ತು.

ಈ ದಾಳಿಯ ಸಂದರ್ಭದಲ್ಲಿ ಜೆಡಿ ಮನೆಯಲ್ಲಿ ಹುಡುಕಿದಷ್ಟು ಚಿನ್ನ ಪತ್ತೆಯಾಗಿದೆ. ಸುಮಾರು ಮೂರು ಕೋಟಿ ಮೌಲ್ಯದ ಗೋಲ್ಡ್ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.ACB Raid: ಇಂದು ಯಾರೆಲ್ಲಾ ‘ಭ್ರಷ್ಟ ಅಧಿಕಾರಿ’ಗಳ ಮೇಲೆ ‘ACB ಅಧಿಕಾರಿ’ಗಳ ದಾಳಿ ಗೊತ್ತಾ.? ಇಲ್ಲಿಂದೆ ಸಂಪೂರ್ಣ ಮಾಹಿತಿ

ಇಂದು ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶ ಟಿ.ಎಸ್.ರುದ್ರೇಶಪ್ಪ ಎಂಬುವರ ಮೇಲೆ ಎಸಿಪಿ ಅಧಿಕಾರಿಗಳು ದಾಳಿ ( ACB Raid ) ನಡೆಸಿದ್ದಾರೆ. 44 ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ 5 ತಂಡಗಳಲ್ಲಿ ರುದ್ರೇಶಪ್ಪ ಅವರಿಗೆ ಸೇರಿದಂತ ಐದು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಅಕ್ರಮ ಆಸ್ತಿ, ಚಿನ್ನಾಭರಣ ಪತ್ತೆಯ ಕಾರ್ಯದಲ್ಲಿ ತೊಡಗಿದ್ದಾರೆ.

ಕೃಷಿ ಇಲಾಖೆಯ ಜೆಡಿ ರುದ್ರೇಶಪ್ಪ ಅವರ ಗದಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಐದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವಂತ ಎಸಿಬಿ ಅಧಿಕಾರಿಗಳಿಗೆ, 7 ಕೆಜಿ ಚಿನ್ನ, 15 ಲಕ್ಷ ನಗದು, 3 ಕೋಟಿ ಮೌಲ್ಯದ 9 ಎಫ್ ಗೋಲ್ಡ್ ಪತ್ತೆ ಹಚ್ಚಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!