ಮಂಗಳೂರು: ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ನಾಲ್ವರ ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್‌ ಟೈಲ್ಸ್‌ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳು ಮಧ್ಯಪ್ರದೇಶದ ಮೂಲದ ಜಯ ಸಿಂಗ್ (21)ಮುನೀಮ್ ಸಿಂಗ್(20) , ಮನೀಶ್ ತಿರ್ಕಿ(33 ) ಮತ್ತು ಝಾರ್ಖಂಡ್ ಮೂಲದ ಮುಖೇಶ್ ಸಿಂಗ್ (20) ಎಂದು ತಿಳಿಯಲಾಗಿದೆ.

ಈ ಬಂಧಿತ ಆರೋಪಿಗಳು ಕಾರ್ಖಾನೆಯಲ್ಲೇ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ.ಮಧ್ಯಪ್ರದೇಶದ ಮೂಲದ ಮೂವರು ಮತ್ತು ಝಾರ್ಖಂಡ್ ಮೂಲದ ಓರ್ವ ಕಾರ್ಮಿಕ ಬಾಲಕಿಯನ್ನು ತಮ್ಮ ಕೋಣೆಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ, ರಕ್ತಸ್ರಾವ ವಾಗುತ್ತಿದ್ದ ವೇಳೆ ಕತ್ತು ಹಿಸುಕಿ ಕೊಲೆಗೈದು ಮೋರಿಯಲ್ಲಿ ಬಿಸಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯ ನಡೆಸಿದ ಬಳಿಕ ಇಬ್ಬರು ಆರೋಪಿಗಳು ಪುತ್ತೂರಿಗೆ ತೆರಳಿದ್ದಾರೆ ಎನ್ನಲಾಗಿದೆ.”ಇನ್ನಿಬ್ಬರು ಬಾಲಕಿಯನ್ನು ಹುಡುಕಾಡುವ ವೇಳೆ ತಾವೂ ಬಂದು ಯಾರಿಗೂ ಗೊತ್ತಾಗದಂತೆ ನಟಿಸಿದ್ದರು” ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಪತ್ರಕರ್ತರಿಗೆ ತಿಳಿಸಿದ್ದಾರೆ.

ನವೆಂಬರ್ 21 ರ ರವಿವಾರ ಸಂಜೆ ಬೆಳಕಿಗೆ ಬಂದ ಪ್ರಕರಣದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿತ್ತು.ನಂತರ ಪೊಲೀಸರು ಆರೋಪಿಗಳ ಹುಡುಕಾಟ ನಡೆಸಿದರು.
ಈಗ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ‌ವಿಚಾರಣೆ ನಡೆಸುತ್ತಿದ್ದಾರೆ

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...
Translate »
error: Content is protected !!