ಜಿಲ್ಲಾಧಿಕಾರಿಗೆ ಬೆದರಿಕೆ, ಹಲ್ಲೆಗೆ ಪ್ರಚೋದನೆ: ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಇದೀಗ ಹಿಂದು ಮುಖಂಡ ಜಗದೀಶ್ ಕಾರಂತ ‘ರುದ್ರ ಗಿರಿಯ ರಣಕಹಳೆ’ ಎಂಬ ಸಭೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಪೇಚಿಗೆ ಸಿಲುಕಿದ್ದಾರೆ.

ಸ್ವತಃ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಅವರು ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ಮತ್ತು ಹಲ್ಲೆ ಮಾಡಲು ಪ್ರಚೋದಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ದೂರು ಸಲ್ಲಿಸಿದ್ದಾರೆ.

ಮಾಹಿತಿಯ ಪ್ರಕಾರ ಜಗದೀಶ್ ಕಾರಂತ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153, 117, 504, 506, 189 ಐಪಿಸಿ ಕಲಂ ಅಡಿ ಪ್ರಕರಣ ದಾಖಲಾಗಿದೆ.

ಪ್ರಕರಣವೇನು?

ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ್, ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21ಕ್ಕೆ ಎಲ್ಲರೂ ಸಿದ್ದರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿ ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸೋ..ಇಲ್ಲವಾದರೇ ಟ್ರಾನ್ಸ್‌ಫರ್ ತೆಗೆದುಕೊಂಡು ಹೋಗೋ.. ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿದ್ದಾರೆ. ಅಲ್ಲದೆ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ ದುಷ್ಪ್ರೇರಣೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜಗದೀಶ್ ಕಾರಂತ್‌ ಅಪರಾಧಿಕ ಕೃತ್ಯವನ್ನು ಎಸಗುವ ಮನೋಧೋರಣೆ ಹೊಂದಿ ಪ್ರಚೋದನಾಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿದ್ದಾರೆ. ಡಿಸೆಂಬರ್ 21ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು ಪ್ರಚೋದಿಸಿ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!