ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ – ಪ್ರಮೋದ್ ಮುತಾಲಿಕ್

ಕಲ್ಬುರ್ಗಿ : ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ತೆರವುಗೊಳಿಸುವಂತೆ ಪ್ರಮೋದ್ ಮುತಾಲಿಕ್ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ. ಇದು ನ್ಯಾಯಾಲಯ ಆದೇಶ ಉಲ್ಲಂಘನೆಯಾಗುತ್ತದೆ. ದಿನದ ಐದು ಬಾರಿ ಮಸೀದಿಗಳಲ್ಲಿನ ಪ್ರಾರ್ಥನೆ ಶಬ್ಧ ಕಿರಿಕಿರಿಯುಂಟಾಗುತ್ತಿದೆ ಎಂದರು.

ಈ ಬಗ್ಗೆ ಶ್ರೀರಾಮಸೇನೆ ಹೋರಾಟ ಶುರು ಮಾಡಲು ಅಣಿಯಾಗುತ್ತಿದೆ‌. ಪ್ರಾರ್ಥನೆ ಮಾಡಲು ಅಭ್ಯಂತರವಿಲ್ಲ. ಆದರೆ, ಶಬ್ದಕ್ಕೆ ನಮ್ಮ ತಕರಾರು ಇದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ. ಅನೇಕ‌ ಮುಸ್ಲಿಂ ದೇಶಗಳಲ್ಲಿಯೇ ಮಸೀದಿಗಳ ಮೈಕ್ ತೆಗೆಯಲಾಗಿದೆ. ಆದರೆ, ಇಲ್ಲಿ ಮಾತ್ರ ಕಾನೂನು ಪಾಲನೆಯಾಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮತಾಂತರ ಕಾಯ್ದೆ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗಿದೆ ಎಂದು ಆರೋಪಿಸಿದ ಅವರು, 50 ಕ್ಕೂ ಅಧಿಕ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಆಗ್ರಹಿಸಿದ್ದೆವು. ಕಾನೂನು ಜಾರಿಗೆ ತರದಿದ್ದರೆ ಜನವರಿ ತಿಂಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಕಡೆ ಕ್ರಿಶ್ಚಿಯನ್ ಸಮುದಾಯದವರು ತಮ್ಮ ತಂತ್ರಗಳನ್ನು ಉಪಯೋಗಿಸಿ ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಪಾಡಿಗೆ ನೀವು ಚರ್ಚ್‌ನಲ್ಲಿ ಪ್ರಾರ್ಥನೆ ಮಾಡಿ‌, ಇಲ್ಲ ಅಂದ್ರೆ ಒದ್ದು ಓಡಿಸುತ್ತೇವೆ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!