ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ಜಮಾಅತೆ ಇಸ್ಲಾಮಿ ಹಿಂದ್ ಪ್ರವಾದಿಯ ಮಾದರಿ ಅನುಸರಿಸುತ್ತಿದೆ : ಕೋಟ ಇಬ್ರಾಹಿಮ್ ಸಾಹೇಬ್

‌ಜಮಾಅತೆ ಇಸ್ಲಾಮೀ ಹಿಂದ್ ವಿವಿಧ ರೀತಿಯಲ್ಲಿ ಜನಸೇವೆಯಲ್ಲಿ ತೊಡಗಿದ್ದು ಸಮಾಜದ ಅಶಕ್ತರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಪ್ರವಾದಿ ಮಹಮ್ಮದ್(ಸ)ರ ಮಾದರಿಯನ್ನು ಅನುಸರಿಸುತಿದೆ. ಇದು ಅಲ್ಲಾಹನ ಆಜ್ಞೆ ಪಾಲಿಸಿ ಆತನಿಗೆ ಕೃತಜ್ಞತೆಯನ್ನು ಅರ್ಪಿಸುವ ಉತ್ತಮ ವಿಧಾನ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೋಟ ಇಬ್ರಾಹಿಮ್ ಸಾಹೇಬ್’ರವರು ಹೇಳಿದರು. ಅವರು ತೋನ್ಸೆ-ಹೂಡೆ ಜಮಾಅತೆ ಇಸ್ಲಾಮಿ ಹಿಂದ್’ನ ವತಿಯಿಂದ ಹೂಡೆಯ ಎಫ್.ಎಮ್ ಅಲ್ತಾಫ್’ರ ಕುಟುಂಬಕ್ಕೆ ನೂತನವಾಗಿ ನಿರ್ಮಿಸಿ ಕೊಟ್ಟ ಮನೆಯ ಕೀಲಿಗೈ ಹಸ್ತಾಂತಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ತೋನ್ಸೆ ಪಂಚಾಯತ್ ಕಾರ್ಯದರ್ಶಿ ದಿನಕರ್ ಬೆಂಗ್ರೆಯವರು ಮನೆ ನಿರ್ಮಿಸಿ ಕೊಡಲಿಕ್ಕಾಗಿ ಮಾರಣಾಂತಿಕ ಕಾಯಿಲೆಯಿಂದಾಗಿ ಕಾಲು ಕಳೆದುಕೊಂಡ ಹೊರತಾಗಿಯೂ ದುಡಿದು ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಅಲ್ತಾಫ್’ರನ್ನು ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾದ ಆಯ್ಕೆ ಎಂದು ಹೇಳಿದರು. ಅಲ್ಲದೆ ಜಮಾಅತೆ ಇಸ್ಲಾಮಿ ಹಿಂದ್’ನ ಇತರ ಸೇವಾಕಾರ್ಯಗಳಲ್ಲಿಯೂ ತೊಡಗಿಕೊಡಿರುವುದು ಪ್ರಶಂಸಾರ್ಹ ಎಂದು ಹೇಳಿದರು.

‌”ಆರ್ಥಿಕವಾಗಿ ಅಶಕ್ತ ಸೂರಿಲ್ಲದ ಕುಟುಂಬಗಳಿಗೆ ಸೂರು ಒದಗಿಸುವ ಜಮಾಅತೆ ಇಸ್ಲಾಮಿ ಹಿಂದ್, ತೋನ್ಸೆ – ಹೂಡೆ ಶಾಖೆಯ ಯೋಜನೆಯಂತೆ” ಈ ಮನೆ ನಿರ್ಮಿಸಿ ಕೊಡಲಾಗಿದೆ. ಈಗಾಗಲೇ ಸಮಾಜದ ಉದ್ಯೋಗವಿಲ್ಲದ ಅಶಕ್ತರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿಯೂ ಸ್ಥಳೀಯ ಶಾಖೆ ಆರಂಭಿಕ ಹೆಜ್ಜೆ ಇಟ್ಟಿದೆ. ಈ ಎಲ್ಲಾ ಕೆಲಸಗಳಿಗೆ ಪ್ರವಾದಿ ಮಹಮ್ಮದ್ (ಸ)ರ ಜೀವನ ಮಾದರಿಯೇ ನಮಗೆ ಪ್ರೇರಣೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಮಾಅತೆ ಇಸ್ಲಾಮಿ ಹಿಂದ್ ಸ್ಥಾನೀಯ ಅಧ್ಯಕ್ಷರಾದ ಅಬ್ದುಲ್ ಕಾದಿರ್ ಮೊಹಿಯ್ಯುದ್ದೀನ್ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮಲ್ಪೆ ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷರಾದ ಶಬ್ಬೀರ್ ಮಲ್ಪೆ , ಎಚ್.ಆರ್.ಎಸ್ ಉಡುಪಿ ಜಿಲ್ಲಾ ಹೊಣೆಗಾರರಾದ ಹಸನ್ ಕೋಡಿಬೇಂಗ್ರೆ, ಅಬುಲೈಸ್ ಇಸ್ಲಾಹಿ ಮಸೀದಿಯ ಇಮಾಮರಾದ ಮಹಮ್ಮದ್ ತಾರಿಕ್, ಎಸ್.ಐ.ಓ ತೋನ್ಸೆಯ ಅಧ್ಯಕ್ಷರಾದ ವಸೀಮ್ ಅಬ್ದುಲ್ಲಾ, ಎಚ್.ಆರ್.ಎಸ್ ತೋನ್ಸೆ ಸಂಚಾಲರಾದ ಎನ್. ಝೈನುಲ್ಲಾ, ಪಂಚಾಯತ್ ಸದಸ್ಯರುಗಳಾದ ಕುಸುಮ, ಜಮೀಲಾ ಸದೀದಾ, ವಿಜಯ ಪಡುಕುದ್ರು, ಸುಝಾನ್ ಗುಜ್ಜರಬೆಟ್ಟು, ಮುಮ್ತಾಝ್, ಯಶೋಧಾ, ಆಶಾ , ಡಾ.ಫಹೀಮ್ ಅಬ್ದುಲ್ಲಾ ಇನ್ನಿತರರು ಉಪಸ್ಥಿತರಿದ್ದರು. ಮುಫೀದ್ ಅವರ ಕುರಾನ್ ಪಠನದೊಂದಿಗೆ ಆರಂಭಗೊಂಡ ಸಭೆಯನ್ನು ಯಾಸೀನ್ ಕೋಡಿಬೇಂಗ್ರೆ ನಿರೂಪಿಸಿ ಕೊನೆಯಲ್ಲಿ ಧನ್ಯವಾದವಿತ್ತರು.


ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು...

Related Articles

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...

ಕೋರೋನ ಹೆಚ್ಚಾದರೆ ಶಾಲಾ ಕಾಲೇಜ್ ಗಳು ಬಂದ್ : ಸಚಿವ ಬಿ. ಸಿ ನಾಗೇಶ್

ಬೆಂಗಳೂರು,(ಡಿ.6)-ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ...
Translate »
error: Content is protected !!