ಉಡುಪಿಯಲ್ಲಿ ಮೀತಿ ಮೀರಿದ ಆತ್ಮಹತ್ಯೆ ಪ್ರಕರಣಗಳು!

ಉಡುಪಿ: ಜಿಲ್ಲೆಯಲ್ಲಿ ಪ್ರತಿದಿನ ಎಂಬಂತೆ ಸರಾಸರಿ ಮೂರರಿಂದ ನಾಲ್ಕು ಮಂದಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

ಹೆಚ್ಚಾಗಿ ಖಿನ್ನತೆ, ಕುಡಿತದ ಸಮಸ್ಯೆ ಮತ್ತು ಅರ್ಥಿಕ ಕಾರಣಕ್ಕಾಗಿ ಆತ್ಮಹತ್ಯೆಗೆ ಜನರು ಶರಣಾಗುತ್ತಿರುವುದು ಹೆಚ್ಚಾಗಿ ವರದಿಯಾಗಿದೆ. ಮುಖ್ಯವಾಗಿ ಯುವಕರು ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತ. ವಯೋವೃದ್ಧರೂ ಕೂಡ ಖಾಯಿಲೆಯ ಕಾರಣಗಳಿಗಾಗಿ ಮನನೊಂದು ಜೀವ ಹರಣ ಮಾಡಿಕೊಳ್ಳುತ್ತಿದ್ದಾರೆ.

ಅದರಲ್ಲೂ ಮುಖ್ಯವಾಗಿ ಲಾಕ್’ಡೌನ್ ನಂತರದ ಕಾಲಘಟ್ಟದಲ್ಲಿ ಉಂಟಾದ ತೀವ್ರ ಅರ್ಥಿಕ ಬಿಕ್ಕಟ್ಟಿನ ಕಾರಣಕ್ಕೆ ನೇಣಿಗೆ ಶರಣಾಗುತ್ತಿದ್ದಾರೆ. ಪ್ರತಿ ದಿನ ಎಂಬಂತೆ ಉಡುಪಿ ಜಿಲ್ಲೆಯ ಯಾವುದಾದರೂ ಒಂದೆರಡು ಪೊಲೀಸ್ ಠಾಣೆಯಲ್ಲಿ ವಿಷ ಸೇವಿಸಿ, ನೇಣು ಬಿಗಿದು, ಬಾವಿಗೆ ಹಾರಿ, ನದಿಗೆ ಹಾರಿ ಆತ್ಮಹತ್ಯೆ ಎಂಬ ಸುದ್ದಿ ಸಾಮಾನ್ಯ ಎಂಬುವಂತಾಗಿದೆ.

ಈ ಕುರಿತು ಉಡುಪಿ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜನರನ್ನು ಇಂತಹ ತೀವ್ರತರವಾದ ಚಿಂತನೆಯಿಂದ ಹೊರ ತರಲು ಕೌನ್ಸಿಲಿಂಗ್ ನಂತಹ ಕಾರ್ಯಕ್ರಮ, ಜನರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ. ಯುವಜನರನ್ನು ಕುಡಿತ ಸೇರಿದಂತೆ ಇನ್ನಿತರ ದುಶ್ಚಟಗಳಿಂದ ರಕ್ಷಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವ ಅನಿವಾರ್ಯವಿದೆ. ಬುದ್ಧಿವಂತರ ಜಿಲ್ಲೆಯೆಂದು ಹೆಸರುವಾಸಿಯಾಗಿರುವ ಉಡುಪಿಯಲ್ಲಿ ಈ ರೀತಿಯಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿರುವುದು ನಿಜಕ್ಕೂ ವಿಪರ್ಯಾಸ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!