ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್ ( ಡಿ.4):ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ ಬಳಿಯ ಬಂಗಾ ಸಾಹಿಬ್ ಬಳಿ ಹೀಗೆ ಮಾಡಿದೆ.

ಕಳೆದ ವರ್ಷ ಹಿರಿಯ ರೈತ ಮಹಿಳೆಯೊಬ್ಬರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗಳಿಗೆ ಕ್ಷಮೆಯಾಚಿಸಲು ಕೋರಿ ಕಂಗನಾರನ್ನು ಪ್ರತಿಭಟನಾಕಾರರು ಹೀಗೆ ಅಡ್ಡಗಟ್ಟಿದ್ದರು.ಹಿರಿಯ ರೈತ ಮಹಿಳೆಯೊಬ್ಬರ ಭಾವಚಿತ್ರವೊಂದನ್ನು ಪೋಸ್ಟ್ ಮಾಡಿದ್ದ ಕಂಗನಾ, “100 ರೂ.ಗೆ ಪ್ರತಿಭಟನೆ ಮಾಡಲು ಮಹಿಳೆಯರು ದೊರಕುತ್ತಾರೆ,” ಎಂದು ಪೋಸ್ಟ್ ಮಾಡಿದ್ದರು.

‘ವೈ’ ಕೆಟಗರಿ ಭದ್ರತೆ ಹೊಂದಿರುವ ಕಂಗನಾ, ಚಂಡೀಘಡ ವಿಮಾನ ನಿಲ್ದಾಣದಿಂದ ಹಿಮಾಚಲ ಪ್ರದೇಶದ ಕುಲುವಿನಲ್ಲಿರುವ ತಮ್ಮ ತವರೂರಿನತ್ತ ಸಾಗುತ್ತಿದ್ದರು. ಈ ವೇಳೆ, ಮೇಲ್ಕಂಡ ಜಾಗದ ಸುತ್ತಲಿನ ಊರುಗಳಿಂದ ಬಂದ ಪ್ರತಿಭಟನಾಕಾರರು ಆಕೆಯ ಕಾರನ್ನು 30-35 ನಿಮಿಷಗಳ ಕಾಲ ಅಡ್ಡಗಟ್ಟಿದ್ದರು ಎನ್ನಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಂಗನಾ, “ಅವರು ನನ್ನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ, ನನ್ನ ಮೇಲೆ ಅವಾಚ್ಯವಾಗಿ ನಿಂದನೆ ಮಾಡಿದ್ದರು. ಪೊಲೀಸರು ಇಲ್ಲಿ ಇರದೇ ಇದ್ದಿದ್ದರೆ, ಅವರು ಕಲ್ಲು ತೂರಾಟಕ್ಕೂ ಮುಂದಾಗಲಿದ್ದರು.ತಮ್ಮ ಟ್ವೀಟ್ ಬಗ್ಗೆ ಸ್ಪಷ್ಟನೆ ಕೊಟ್ಟ ಕಂಗನಾ, ತಾವು ಆ ರೀತಿ ಹೇಳಿದ್ದು ಶಹೀನ್‌ಬಾಗ್ ಪ್ರತಿಭಟನಾಕಾರರ ಬಗ್ಗೆಯೇ ಹೊರತು ರೈತ ಮಹಿಳೆ ಬಗ್ಗೆ ಅಲ್ಲ ಎಂದಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!