ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು.
ಅವರು ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನಲ್ಲಿ ಕಥೊಲಿಕ್‌ ಸಭಾ ಉಡುಪಿ ಪ್ರದೇಶ, ಆಮ್ಚೊ ಸಂದೇಶ್‌ ಕೊಂಕಣಿ ಮಾಸಿಕ ಮತ್ತು ಕೊಂಕಣಿ ಸಂಘಟನೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಆಮ್ಚೊಂ ಸಂದೇಶ್‌ ಪ್ರತಿನಿಧಿಗಳ ಮತ್ತು ಬರಹಗಾರರ ಸಮ್ಮೇಳನ ಹಾಗೂ ದಿ. ಜೋಸೆಪ್‌ ಮೇರಿ ಪಿಂಟೊ ನಿಡ್ಡೋಡಿ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು
ಬರಹಗಾರನಾಗಬೇಕಾದರೆ ಮೊದಲು ನಾವು ಹೆಚ್ಚು ಹೆಚ್ಚು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ನಮ್ಮಲ್ಲಿ ಜ್ಞಾನದ ವೃದ್ದಿಯಾಗುತ್ತದೆ ಇದರಿಂದ ಬರೆಯುವ ಕಲೆ ನಮ್ಮಲ್ಲಿ ಹುಟ್ಟಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ಬರಹಗಾರ, ಸಾಹಿತಿಯಾಗಲು ಸಾಧ್ಯವಾಗುತ್ತದೆ ಎಂದರು.
ಇದೇ ವೇಳೆ ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇವರ ಸಹಭಾಗಿತ್ವದಲ್ಲಿ ನೀಡಲಾಗುವ ದಿ. ಜೋಸೆಫ್‌ ಮತ್ತು ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯ ಪುರಸ್ಕಾರ -2021 ಕ್ಕೆ ವಿತಾಶಾ ರಿಯಾ ರೊಡ್ರಿಗಸ್‌ (ಮುದ್ದು ತೀರ್ಥಹಳ್ಳಿ) ಅವರಿಗೆ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಚಲಿತ ಲೇಖನಗಳನ್ನು ಬರೆಯುವ ಕುರಿತು ದೈಜಿ ವಲ್ಡ್‌ ಮಂಗಳೂರು ಬ್ಯೂರೊ ಮುಖ್ಯಸ್ಥರಾದ ಸ್ಟ್ಯಾನಿ ಬೇಳಾ, ಸಂಪಾದಕರಿಗೆ ಪತ್ರ ಬರೆಯುವ ಕುರಿತು ಆಮ್ಚೊ ಸಂದೇಶ್‌ ಪತ್ರಿಕೆಯ ವಿಲ್ಫ್ರೇಡ್‌ ಲೋಬೊ, ವರದಿಗಾರಿಕೆಯ ಕುರಿತು ಉಡುಪಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕರಾದ ಮೈಕಲ್‌ ರೊಡ್ರಿಗಸ್‌ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಮೇರಿ ಡಿಸೋಜಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಿವ್ಯದೀಪ ಪ್ರಕಾಶನ ಸಂತೆಕಟ್ಟೆ ಕಲ್ಯಾಣಪುರ ಇದರ ವತಿಯಿಂದ ಮರುಮುದ್ರಣಗೊಂಡ ರಾಕ್ಣೋ ವಾರಪತ್ರಿಕೆಯ ಮಾಜಿ ಸಂಪಾದಕರಾದ ವಂ|ಮಾರ್ಕ್‌ ವಾಲ್ಡರ್‌ ಅವರ ಆತ್ಮಚರಿತ್ರೆ ಲೊಕಾಚೊ ಯಾಜಕ್‌ ಪುಸ್ತಕವನ್ನು ಅನಾವರಣಗೊಳಿಸಲಾಯಿತು.

ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಪ್ರಧಾನ ಕಾರ್ಯದರ್ಶಿ ಗ್ರೆಗೋರಿ ಪಿಕೆ ಡಿʼಸೋಜಾ, ಮಾಜಿ ಅಧ್ಯಕ್ಷ ಆಲ್ವಿನ್‌ ಕ್ವಾಡ್ರಸ್‌, ಆಮ್ಚೊ ಸಂದೇಶ್‌ ಸಂಚಾಲಕರಾದ ಎಲ್ರೋಯ್‌ ಕಿರಣ್‌ ಕ್ರಾಸ್ಟೊ, ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಕೋಶಾಧಿಕಾರಿ ಮೆಲ್ರಿಡಾ ರೊಡ್ರಿಗಸ್‌, ದಿ. ಜೋಸೆಪ್‌ ಮೇರಿ ಪಿಂಟೊ ನಿಡ್ಡೋಡಿ ಕುಟುಂಬಿಕರಾದ ವಾಲ್ಟರ್‌ ಸಿರಿಲ್‌ ಪಿಂಟೊ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕರಾದ ಡಾ|ಜೆರಾಲ್ಡ್‌ ಪಿಂಟೊ ಸ್ವಾಗತಿಸಿ, ಎಡ್ವರ್ಡ್‌ ಲಾರ್ಸನ್‌ ಡಿʼಸೋಜಾ ಪೇತ್ರಿ ಅತಿಥಿಗಳ ಪರಿಚಯ ಮಾಡಿದರು. ಕಲ್ಯಾಣಪುರ ವಲಯ ಅಧ್ಯಕ್ಷರಾದ ರೋಜಿ ಬಾರೆಟ್ಟೊ ವಂದಿಸಿ, ಡಾ ಫ್ಲಾವಿಯಾ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!