ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಅಧ್ಯಕ್ಷ ಅಬ್ದುಲ್ ಸಮಿ ಹಳಗೇರಿ ರವರ ಅಧ್ಯಕ್ಷತೆಯಲ್ಲಿ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ಮೈನಾರಿಟಿ ವಿದ್ಯಾರ್ಥಿವೇತನ ಶಿಬಿರವು ಜಾಮಿಯ ಮಸೀದಿ ಹಳಗೇರಿಯಲ್ಲಿ ನಡೆಯಿತು.

ಮೌಲಾನಾ ಹಸೀನುಲ್ ಹಖ್ ಕಾಸಿಮಿ (ಖತೀಬರು, ಜಾಮಿಯ ಮಸೀದಿ ಹಳಗೇರಿ) ರವರ ಕಿರಾತ್ ಮೂಲಕ  ಸಮಾರಂಭವನ್ನು ಪ್ರಾರಂಭಿಸಲಾಯಿತು. ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಬಗ್ಗೆ ತಿಳಿಸಿದರು. ಡಾ. ತೇಜಸ್ವಿನಿ ಎ. (ಜಿಲ್ಲಾ ಸಂಯೋಜಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಉಡುಪಿ) ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಸವಿವರವಾಗಿ ವಿವರಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಎಸ್. ಎಮ್. ಇರ್ಷಾದ್ ನಮ್ಮ ನಾಡ ಒಕ್ಕೂಟದ ಕಾರ್ಯ ಚಟುವಟಿಕೆಗಳನ್ನು ತಿಳಿಸಿದರು.
ಜಿಲ್ಲಾ ಖಜಾಂಚಿ ಸಯ್ಯದ್ ಅಜ್ಮಲ್ ಶಿರೂರು ಮತ್ತು ಬೈಂದೂರು ತಾಲೂಕು ಉಪಾಧ್ಯಕ್ಷ ಮಮ್ಡು ಇಬ್ರಾಹೀಮ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸದಸ್ಯ ಝೈನುಲ್ ಅಬಿದಿನ್ ಹಳಗೇರಿ, ಹಳಗೇರಿ ಓವರ್ಸೀಸ್ ಕಮಿಟಿ ಸದಸ್ಯರಾದ ಮುಸೀನ್ ಹಳಗೇರಿ, ಮುಷ್ತಾಕ್ ಹಳಗೇರಿ, ಜಾಮಿಯ ಮಸೀದಿಯ ಅಧ್ಯಕ್ಷರು ಝುಲ್ಫಿಕಾರ್ ಅಲಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಈ-ಶ್ರಮ್ ಕಾರ್ಡ್ ಮಾಡಿಕೊಡಲು ಮುಸೀನ್ ಹಳಗೇರಿ, ಅಬ್ದುಲ್ ಮುಸೈಫ್ ಹಳಗೇರಿ, ನಯೀಮ್ ಹಳಗೇರಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು.

ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಜಮಾತ್ ಬಾಂಧವರು ಶಿಸ್ತು ಹಾಗೂ ಅತೀ ಉತ್ಸಾಹದಿಂದ ಭಾಗವಹಿಸಿ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ಮಾಡಿಕೊಳ್ಳುವ ಮೂಲಕ ಈ ಶಿಬಿರ ಯಶಸ್ಸುಗೊಳಿಸಲು ಸಹಕರಿಸಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ...
Translate »
error: Content is protected !!