ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಹಿನ್ನೆಲೆ : ಸಚಿವ ಗೋವಿಂದ ಕಾರಜೋಳರಿಂದ ಮತ್ತೊಂದು ದಾಖಲೆ ಬಿಡುಗಡೆ

ಬಾಗಲಕೋಟೆ (ಜ.10): ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ, ಟಿ.ಬಿ.ಜಯಚಂದ್ರ ರವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅನುಮೋದನೆಯ ನಂತರವೂ ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕ್ರಿಯರಾಗಿದ್ದರು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಕಟುವಾಗಿ ಟೀಕಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಷಯದ ಬಗ್ಗೆ ರಚಿತವಾಗಿರುವ ಕಾವೇರಿ ಜಲ ವಿವಾದ ನ್ಯಾಯಾಧಿಕರಣ ನೀಡಿರುವ ಆದೇಶ ತಮಗೆ ತಿಳಿದಿರುವ ವಿಷಯವಾಗಿದೆ. ಸದರಿ ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಕರ್ನಾಟಕ ರಾಜ್ಯವು ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ಸದರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇರುತ್ತದೆ. ಅದರಂತೆ ಮೇಕೆದಾಟು ಜಲವಿದ್ಯುತ್ ಸಮಸ್ಯೆಯು ಗಂಭೀರವಾಗಿರುವುದರಿಂದ ಹಾಗೂ ನಾವು ಜನತೆಗೆ ನೀಡಿರುವ ಭರವಸೆಯಂತೆ ವಿದ್ಯುತ್ ಉತ್ಪಾದನೆಯನ್ನು ಹೆಚ್ಚು ಮಾಡಲೇಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಈ ಪ್ರತಿಷ್ಟಿತ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈಗಾಗಲೇ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವಲ್ಲಿ ಸಾಕಷ್ಟು ವಿಳಂಬವಾಗಿದೆ.

ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂಬಂಧ ಮೇಲ್ಕಂಡ ಕಂಡಿಕೆಗಳಲ್ಲಿ ಅಡ್ವೋಕೇಟ್ ಜನರಲ್ ರವರು ನೀಡಿರುವ ಸಕಾರಾತ್ಮಕ ಅಭಿಪ್ರಾಯ ಮತ್ತು ಇತರೆ ಮಾಹಿತಿಯನ್ನು ಅವಗಾಹಿಸಿ ಈ ಕೂಡಲೇ ಯೋಜನೆಯನ್ನು ಪ್ರಾರಂಭಿಸಲು ಸಂಬಂಧಪಟ್ಟವರಿಗೆ ಸೂಕ್ತ ಆದೇಶ ನೀಡಬೇಕಾಗಿದೆ ಕೋರಿದೆ’. ಎಂದು ವಿವರವಾದ ಮತ್ತು ಸ್ಪಷ್ಟವಾದ ಟಿಪ್ಪಣಿಯನ್ನು ಮುಖ್ಯಮಂತ್ರಿಗಳಿಗೆ ಕಡತದಲ್ಲಿ ಕಳುಹಿಸಿದ್ದಾರೆ. ಮತ್ತು ಅಂದು ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಈ ಟಿಪ್ಪಣಿಯನ್ನು ಅನುಮೋದಿಸಿ, ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ್ರಿಗೆ ಕಳುಹಿಸಿದ್ದು ಸರ್ಕಾರದ ಕಡತಗಳಲ್ಲಿ ದಾಖಲಾಗಿದೆ ಎಂದು ಗೋವಿಂದ ಕಾರಜೋಳ ರವರು ವಿವರಿಸಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!