ಗೋವಾ ಚುನಾವಣೆ : ಮಹತ್ವದ ಸಭೆ ನಡೆಸಿದ ದೇವೇಂದ್ರ ಫಡ್ನವೀಸ್

ಪಣಜಿ,(ಜ.13); ಗೋವಾ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ವಿವಿಧ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿವೆ. ಫೆಬ್ರವರಿ 14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಗೋವಾ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಮಹತ್ವದ ಸಭೆ ನಡೆಸಿದರು.ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬುಧವಾರ ಸಂಜೆ ಪಣಜಿಯಲ್ಲಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ಸಮಿತಿ ಸಭೆ ನಡೆಯಿತು. ಪ್ರಚಾರ ಕಾರ್ಯದಿಂದ ಹಿಡಿದು, ಅಭ್ಯರ್ಥಿಗಳ ಪಟ್ಟಿ ತಯಾರಿ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜನವರಿ 21ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ.ಜನವರಿ 31 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಧಿಸೂಚನೆ ಪ್ರಕಟವಾಗುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಬೇಕಿದೆ. ಈ ಕುರಿತು ರಾಜ್ಯ ಬಿಜೆಪಿ ನಾಯಕರ ಜೊತೆ ದೇವೇಂದ್ರ ಫಡ್ನವೀಸ್ ಚರ್ಚೆ ನಡೆಸಿದರು.

ಇಬ್ಬರು ಶಾಸಕರ ರಾಜೀನಾಮೆ ಸೋಮವಾರ ಬಿಜೆಪಿಯ ಇಬ್ಬರು ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಬಿಜೆಪಿ ತೆರೆದಿದ್ದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಸಚಿವರಾಗಿದ್ದ ಮೈಕಲ್ ಲೋಬೋ ಸಚಿವ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಈಗಾಗಲೇ ಕಾಂಗ್ರೆಸ್ ಸೇರಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!