ಮೇಕೆದಾಟು ಯೋಜನೆ ಕಾಂಗ್ರೆಸ್ ನಾಯಕರ ಪಾದಯಾತ್ರೆ : ಪೊಲೀಸರು ಕೆಲಸವೇ ಮಾಡಿಲ್ಲ ಡಿ. ಕೆ. ಶಿ

ಬೆಂಗಳೂರು ( ಜ.15): ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸುಮಾರು 11 ದಿನಗಳ ಕಾಲ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದರು. ಆದರೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಐದನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಿದ್ದರು.
ಪಾದಯಾತ್ರೆ ವೇಳೆ ಕಾರ್ಯನಿರ್ವಹಿಸಿದ್ದ ಕೆಲ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ. ನಮ್ಮ ಕಾರ್ಯಕರ್ತರೇ ನಮಗೆ ಭದ್ರತೆಯನ್ನು ನೀಡಿದ್ದರು ಅಂತ ಹೇಳಿದರು.

ಇನ್ನು ಮೇಕೆದಾಟು ಯೋಜನೆಯಿಂದ ಅರಣ್ಯ ನಾಶವಾಗುತ್ತದೆ ಎಂಬ ವಿಚಾರ ಬಗ್ಗೆ ಮಾತನಾಡಿದ ಡಿಕೆಶಿ, ಮೇಧಾಪಾಟ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೇಧಾ ಪಾಟ್ಕರ್ ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ಸರ್ಕಾರದವರು ಉತ್ತರ ನೀಡಲಿ. ನಾವು ಜನರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಸರ್ಕಾರವೇ ಒಂದು ಸಮಿತಿಯನ್ನು ರಚಿಸಲಿ ಎಂದು ಅಭಿಪ್ರಾಯಪಟ್ಟರು.

ಈ ಯೋಜನೆಗಾಗಿ ಮತ್ತೆ ಪಾದಯಾತ್ರೆ ಮಾಡುತ್ತೇವೆ. ಸರ್ಕಾರ ಸ್ವಲ್ಪ ನಿಯಮ ಸಡಿಲಿಸಲಿ ಪಾದಯಾತ್ರೆ ಮಾಡುತ್ತೇವೆ. 50-100 ಜನಕ್ಕೆ ಅನುಮತಿ ಕೊಟ್ಟರೂ ಪಾದಯಾತ್ರೆ ಮಾಡುತ್ತೇವೆ ಅಂತ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ತಮಿಳುನಾಡಿನವರು ನಮ್ಮ ಸೋದರರು. ಅವರು ನಮ್ಮ ಸ್ನೇಹಿತರು. ನಾವು ಭಾರತದಲ್ಲಿ ಬದುಕುತ್ತಿದ್ದೇವೆ. ಕುಮಾರಸ್ವಾಮಿ ಬಳಿ ಹೊರ ರಾಜ್ಯದವರು ಕೆಲಸ ಮಾಡುತ್ತಿಲ್ಲವೇ. ಏನೋ ಬಾಯಿ ಚಪಲಕ್ಕೆ ಮಾತನಾಡ್ತಾರೆ ಮಾತನಾಡಲಿ ಅಂತ ಹೇಳಿದರು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!