ಬೈಂದೂರು:ಸಿಪಿಎಂ ಪ್ರತಿಭಟಿಸಿ ಸಂಸದರಿಗೆ ಮನವಿ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಬೈಂದೂರು:ಸೆ.19:ಜನರು ಕೋವಿಡ್ ಸಂಕಷ್ಟದಲ್ಲಿರುವಾಗ 11ಸುಗ್ರೀವಾಜ್ಞೆಗಳನ್ನು ಹೊರಡಿಸಿರುವುದು ಜನತೆಯ ಮೇಲೆ ನಡೆಸಿದ ದಾಳಿಯಾಗಿದೆ ಅಲ್ಲದೇ ರಾಜ್ಯದ ಜನರಿಂದ ಸಂಗ್ರಹಿಸಿದ ಜಿಎಸ್ ಟಿ ಪಾಲು ನೀಡದೇ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಿರುವುದು ಖಂಡನೀಯ, ಸಂಸತ್ ಅಧಿವೇಶನ ನಡೆಯುತ್ತಿರುವಾಗ ಬೈಂದೂರು ಸಂಸದರು ಸರಕಾರದ ಸೆಳೆಯಲು ರೈತರ,ಕಾರ್ಮಿಕರ,ಕ್ರಷಿಕರ ಬಗ್ಗೆ ಚರ್ಚೆಯಾಗುವಂತೆ ಧ್ವನಿ ಎತ್ತಬೇಕು ಮತ್ತು ಕೇಂದ್ರ ಸರಕಾರಕ್ಕೆ ಪತ್ರ ಬರೆಯಬೇಕು ಎಂದು ಸಿಪಿಎಂ ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಸಿಪಿಎಂ ರಾಜ್ಯ ಮುಖಂಡರಾದ ಕೆ.ಶಂಕರ್ ಮಾತನಾಡಿ;ಪ್ರಜಾಸತ್ತಾತ್ಮಕವಾಗಿ ಶಾಂತಿಯುತವಾಗಿ ನಡೆಯುವ ರಾಜಕೀಯ ಚಳವಳಿಯನ್ನು ಕ್ರಿಮಿನಲ್ ಅಪರಾಧಗಳೆಂದು ಬಿಂಬಿಸಿ ಸಿಪಿಎಂ ರಾಷ್ಟ್ರೀಯ ಕಾರ್ಯದರ್ಶಿ ಸೀತರಾಮ್ ಯೆಚೂರಿ ಮೇಲೆ ಹೂಡಿರುವ ಮೊಕದ್ದಮ್ಮೆ ಹಿಂಪಡೆಯಬೇಕು.ಹೋರಾಟಗಾರರನ್ನು ಜೈಲಿನಿಂದ ಬಿಡುಗಡೆಗೊಳಿಸಬೇಕು.ಆದಾಯ ತೆರಿಗೆಯಿಂದ ಹೊರಗಿರುವ ಎಲ್ಲರಿಗೂ ರೂ.7500/- ನಗದು ,ಪೌಷ್ಟಿಕಾಂಶ ಆಹಾರ ಒದಗಿಸಿ ಕರೋನ ತಡೆಗಟ್ಟಲು ಕ್ರಮವಹಿಸಬೇಕು ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ವೆಂಕಟೇಶ್ ಕೋಣಿ,ವಲಯ ಸಮಿತಿ ಸದಸ್ಯ ಸಂತೋಷ ಹೆಮ್ಮಾಡಿ ಮಾತನಾಡಿದರು.ನಾಗರತ್ನ ನಾಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಮಾಧವ ದೇವಾಡಿಗ, ಚಂದ್ರದೇವಾಡಿಗ,ರಾಜೀವ ದೇವಾಡಿಗ ಇದ್ದರು.12ಬೇಡಿಕೆಗಳ ಪಟ್ಟಿಯನ್ನು ಸಂಸದರ ಕಛೇರಿಗೆ ನೀಡಲಾಯಿತು.

LEAVE A REPLY

Please enter your comment!
Please enter your name here