ರಾಜ್ಯ ರಾಜಧಾನಿಯಲ್ಲಿ ಸಿಕ್ಕ ಸಿಕ್ಕವರಿಗೆ ಚೂರಿ ಚುಚ್ಚಿದ ಕಿರಾತಕ, ಒರ್ವ ಮೃತ್ಯು!

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಬೆಂಗಳೂರು: ರಾಜ್ಯ ರಾಜಧಾನಿಯೇ ಬೆಚ್ಚಿ ಬಿದ್ದ ಘಟನೆ ಸಂಭವಿಸಿದೆ.

ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದು ದುಷ್ಕೃತ್ಯ ಎಸಗಿರುವ ಘಟನೆ ವರದಿಯಾಗಿದ್ದು, ಘಟನೆಯಲ್ಲಿ ಮಾರಿ(35) ಎಂಬ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ.

ಗಣೇಶ್‌ ಎಂಬ ವ್ಯಕ್ತಿ ಏಕಾಏಕಿ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗುರುತು, ಪರಿಚಯವಿಲ್ಲದವರ ಮೇಲೆ ತನ್ನ ಕೋಪ ತೀರಿಸಿಕೊಂಡಿದ್ದಾನೆ. ಬಾಳೆ ಮಂಡಿ ಸೇರಿದಂತೆ ಮೂರ್ನಾಲ್ಕು ಕಡೆ ಒಟ್ಟು ಎಂಟು ಮಂದಿಗೆ ಗಣೇಶ್ ಚಾಕು ಚುಚ್ಚಿದ್ದಾನೆ.

ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಓರ್ವ ಮೃತಪಟ್ಟಿದ್ದಾನೆ. ಸದ್ಯ ಗಣೇಶನ ದುಷ್ಕೃತ್ಯ ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಕಾಟನ್‌ಪೇಟೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಯಾಕೆ ಈ ರೀತಿ ಮಾಡಿದ ಎಂಬುವುದರ ಬಗ್ಗೆ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here