ಬೆಂಗಳೂರು ಏರ್ಪೋರ್ಟ್ ಗೋದಾಮಿನಿಂದ 2.5 ಕೆ.ಜಿ ಚಿನ್ನ ಗಾಯಬ್, ಆರು ಮಂದಿಯ ವಿರುದ್ಧ ಎಫ್.ಐ.ಆರ್

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಬೆಂಗಳೂರು, ಅಕ್ಟೋಬರ್ 18: ಆಘಾತಕಾರಿ ಘಟನೆಯೊಂದರಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ಗೊದಾಮಿನ ಸರಕು ವಿಭಾಗದಿಂದ 2.5 ಕೆಜಿ ಚಿನ್ನ ಕಾಣೆಯಾಗಿದೆ.

ವಿವಿಧ ಕಳ್ಳಸಾಗಣೆ ಪ್ರಕರಣಗಳಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ವಿಮಾನ ನಿಲ್ದಾಣದ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು.

ಜೂನ್ 2012 ಮತ್ತು ಡಿಸೆಂಬರ್ 2014 ರ ನಡುವೆ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ವಶಪಡಿಸಿಕೊಂಡ ಚಿನ್ನವನ್ನು ವಿಮಾನ ನಿಲ್ದಾಣದ ಎಂಎಚ್‌ಬಿ ಗೊಡೌನ್‌ನಲ್ಲಿ ಇರಿಸಲಾಗಿತ್ತು. ಕಸ್ಟಮ್ಸ್ ಇಲಾಖೆಯ ವಿಜಿಲೆನ್ಸ್ ಅಧಿಕಾರಿಗಳು ನಡೆಸಿದ ಆಂತರಿಕ ತನಿಖೆಯ ಸಂದರ್ಭದಲ್ಲಿ, 13 ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ 2.594 ಕೆಜಿ ಚಿನ್ನ ಗೋಡೌನ್ ನಿಂದ ಕಾಣೆಯಾಗಿದೆ ಎಂದು ಬೆಳಕಿಗೆ ಬಂದಿದೆ.

ಈ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗೋದಾಮಿನ ಸುರಕ್ಷತೆ ಮತ್ತು ಇನ್‌ಚಾರ್ಜ್ ಅಧಿಕಾರಿಗಳ ವಿರುದ್ಧ ಸಿಬಿಐಗೆ ದೂರು ನೀಡಲಾಯಿತು. ಅದರಂತೆ ಅಕ್ಟೋಬರ್ 12 ರಂದು ಐವರು ಕಸ್ಟಮ್ಸ್ ಅಧಿಕಾರಿಗಳು ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾಗಿರುವ ಕಸ್ಟಮ್ಸ್ ಅಧಿಕಾರಿಗಳೆಂದರೆ ವಿನೋದ್ ಚಿನ್ನಪ್ಪ, ಸಹಾಯಕ ಆಯುಕ್ತರು, ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ, ಕೆ ಕೇಶವ್, ಸಹಾಯಕ ಆಯುಕ್ತ ಎನ್ ಜೆ ರವಿಶೇಖರ್, ಅಧೀಕ್ಷಕರು, ಡೀನ್‌ರೆಕ್ಸ್ ಮತ್ತು ಕೆ ಇ ಲಿಂಗರಾಜು.

LEAVE A REPLY

Please enter your comment!
Please enter your name here