ವಿದ್ಯಾರ್ಥಿ ವೇತನ ಶೀಘ್ರವಾಗಿ ಮಂಜೂರು ಮಾಡುವಂತೆ ದೆಹಲಿ ಐ.ಐ.ಟಿ ಅಧಿಕಾರಿಗೆ ಮ‌ನವಿ ಸಲ್ಲಿಸಿದ ಕ್ಯಾಂಪಸ್ ಫ್ರಂಟ್

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಪುತ್ತೂರು :- 2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನ ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದ ಬಗ್ಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ನಿಯೋಗವು ದೆಹಲಿಯಿಂದ ಪುತ್ತೂರಿಗೆ ಆಗಮಿಸಿದ ಐ.ಐ.ಟಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ,ಮನವಿ ಸಲ್ಲಿಸಿದರು.
ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕೀಡಾಗಿದ್ದಾರೆ. ಕೋರೋನ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ,ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಸಲದ ಶಾಲಾ,ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂತಕ್ಕೀಡಾಗಿದ್ದಾರೆ, ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಶೀಘ್ರ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷ ಅಫ್ರೀದ್ ಕೂರ್ನಡ್ಕ, ಸುಳ್ಯ ಅಧ್ಯಕ್ಷ ಅರ್ಫಿದ್ ಅಡ್ಕಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷ ಇಮ್ರಾನ್ ಕಲ್ಲರ್ಪೆ , ಉಪ್ಪಿನಂಗಡಿ ಏರಿಯಾ ಅಧ್ಯಕ್ಷ ರಿಝ್ವಾನ್, ಸಬೀರ್ ಕಲ್ಲರ್ಪೆ, ಸಂಶೀರ್ ಸವಣೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here