ಒಕ್ಕಲಿಗ ಎಂಬ ಹೆಮ್ಮೆ ಇದೆ, ಆದರೆ ನನ್ನ ಜಾತಿ ಕಾಂಗ್ರೆಸ್ – ಡಿ. ಕೆ ಶಿವಕುಮಾರ್

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಬೆಂಗಳೂರು: ಪಕ್ಷದಲ್ಲಿ ಬಹಳಷ್ಟು ಉತ್ತಮ ಪ್ರಗತಿಯಾಗಿದ್ದು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ಬಂದಿದೆ.ಗೆಲ್ಲುತ್ತೇವೆ ಎಂಬ ಭರವಸೆ ಇದೆ.ಚುನಾವಣಾ ವೀಕ್ಷಕರ ಸಭೆಯಲ್ಲಿ ಈ ಬಗ್ಗೆ ಸತ್ಯಾಂಶ ತಿಳಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದ್ರಲ್ಲಿ ಮತದಾರರು ಆತಂಕದಲ್ಲಿದ್ದಾರೆ. ತಮ್ಮ ಮತಗಳು ಮಾರಾಟವಾಗಿವೆ ಎಂದು ಗಾಬರಿಯಲ್ಲಿದ್ದಾರೆ. ಮತದಾರರ ಭಾವನೆಗಳೇನು ಎನ್ನುವುದು ಸೆಪ್ಟೆಂಬರ್ 3 ರಂದು ವ್ಯಕ್ತವಾಗಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಆರ್​ ಆರ್​ ನಗರದಲ್ಲಿ ಒಕ್ಕಲಿಗ ತಂತ್ರ ಹೂಡಲಾಗಿದೆ. ಇದಕ್ಕಾಗಿಯೇ ದಿ. ಐಎಎಸ್​ ಅಧಿಕಾರಿ ಡಿಕೆ ರವಿ ಅವರ ಹೆಂಡತಿ ಕುಸುಮಾ ಅವರನ್ನು ಕಣಕ್ಕೆ ಇಳಿಸಲಾಗಿದೆ. ಡಿಕೆಶಿ ಜಾತಿ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂಬ ಜೆಡಿಎಸ್​ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನ್ನ ಪೋಷಕರು ಒಕ್ಕಲಿಗರು ಆದ ಕಾರಣ ನಾನು ಒಕ್ಕಲಿಗನಾದೆ.ನಾನು ಒಕ್ಕಲಿಗ ಎಂಬ ಬಗ್ಗೆ ನನಗೆ ಹೆಮ್ಮೆ ಇದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗೇಂದ ಮಾತ್ರಕ್ಕೆ ನಾನು ಜಾತಿ ರಾಜಕಾರಣ ಮಾಡುವುದಿಲ್ಲ. ನನ್ನ ಜಾತಿ ಕಾಂಗ್ರೆಸ್ ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here