ಮಂಗಳೂರು; ಸರಳ ದಸರಾ ಆಚರಣೆ, ಹುಲಿ ವೇಷಕ್ಕೆ ಸೀಮಿತ ಅವಕಾಶ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಮಂಗಳೂರು: ಕೋವಿಡ್‌-19 ವ್ಯಾಪಕವಾಗುತ್ತಿರುವುದರಿಂದ ಅ. 17ರಿಂದ 26ರ ವರೆಗೆ ಜಿಲ್ಲೆಯಾದ್ಯಂತ ದಸರಾವನ್ನು ಸಾರ್ವಜನಿಕರು ಅತ್ಯಂತ ಸರಳವಾಗಿ, 100ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಕೋವಿಡ್‌-19 ಮಾರ್ಗಸೂಚಿಗಳು ಉಲ್ಲಂಘನೆ ಯಾದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದಿದ್ದಾರೆ ಈ ಮಾರ್ಗಸೂಚಿಗಳು ನವರಾತ್ರಿ ಹಾಗೂ ದುರ್ಗಾ ಪೂಜೆಯ ಆಚರಣೆಗೂ ಅನ್ವಯವಾಗುತ್ತದೆ.

ಹುಲಿ ವೇಷಗಳಿಗೆ ಸೀಮಿತ ಅನುಮತಿ
ದಸರಾ ಸಂದರ್ಭ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ 10 ಹುಲಿ ವೇಷಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡ ಲಾಗಿದೆ.ಹೊರಗಡೆ ಎಲ್ಲೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here