ವಿದ್ಯುತ್ ಮತ್ತು ನೀರಿನ ದರದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ 50% ರಿಯಾಯಿತಿ ಘೋಷಣೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...
ಜಮ್ಮು ಮತ್ತು ಕಾಶ್ಮೀರ: 2019 ರ ಆಗಸ್ಟ್ 5 ರಂದು ಅರ್ಟಿಕಲ್ 370 ರದ್ದತಿಯ ನಂತರ ವಿಧಿಸಿದ ಕರ್ಫ್ಯೂ ಮತ್ತು ನಂತರ ಕೋರೊನಾದ ಕಾರಣಕ್ಕೆ ಉಂಟಾದ ಲಾಕ್’ಡೌನ್ ನಿಂದ ಅರ್ಥಿಕವಾಗಿ ತತ್ತರಿಸಿದ್ದ ಜಮ್ಮು ಕಾಶ್ಮೀರಕ್ಕೆ ಇದೀಗ 1350 ಕೋಟಿಯ ಪರಿಹಾರ ಘೋಷಣೆ ಮಾಡಲಾಗಿದೆ.
ಇತ್ತೀಚ್ಚಿಗೆ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿರುವ ಮನೋಜ್ ಸಿನ್ಹಾ ಕಾಶ್ಮೀರದ ಅರ್ಥಿಕ ಹಿನ್ನಡೆಗೆ ಪರಿಹಾರವಾಗಿ ವಿದ್ಯುತ್ ಮತ್ತು ನೀರಿನ ದರದಲ್ಲಿ 50% ರಿಯಾಯಿತಿಯನ್ನು ಘೋಷಿಸಿದ್ದಾರೆ. ಇದಕ್ಕಾಗಿ 105 ಕೋಟಿ ಮೀಸಲಿಟ್ಟಿರುವ ಬಗ್ಗೆ ತಿಳಿಸಿದ್ದಾರೆ.
ಅದರೊಂದಿಗೆ ಮಧ್ಯಮ ಮತ್ತು ಸಣ್ಣ ಉದ್ದಿಮೆದಾರರಿಗೆ ಪರಿಹಾರ ಘೋಷಿಸುವ ಬಗ್ಗೆ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಕೈ ಮಗ್ಗ ಉದ್ದಿಮೆಯಲ್ಲಿ ತೊಡಗಿಸಿಕೊಂಡವರಿಗೆ 1-2 ಲಕ್ಷ ಪರಿಹಾರ ನೀಡುವ ಬಗ್ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here