ಕೋವಿಡ್ – 19 ಪಿಡುಗಿಗೆ ನಾಲ್ಕು ತಿಂಗಳ ಕಂದಮ್ಮ ಮೃತ್ಯು

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಕೋಝಿಕೋಡ್‌ : ಮೊದಲೆಲ್ಲಾ ವೃದ್ಧರನ್ನು ಬಲಿ ಪಡೆಯುತ್ತಿದ್ದ ಕರೊನಾ ವೈರಸ್‌, ನಿಧಾನವಾಗಿ ಯುವಕರನ್ನೂ ಸೆಳೆಯತೊಡಗಿತ್ತು. ಇದೀಗ ನವಜಾತ ಶಿಶುಗಳ ದೇಹವನ್ನೂ ಆಕ್ರಮಿಸಿ ಅವರನ್ನು ಸಾವಿನ ದವಡೆಗೆ ನೂಕುತ್ತಿದೆ.

ಇಂಥದ್ದೊಂದು ವರದಿ ಕೇರಳದ ಕೋಝಿಕೋಡ್‌ನಲ್ಲಿ ನಡೆದಿದೆ. ನಾಲ್ಕು ತಿಂಗಳ ಶಿಶು ಕರೊನಾ ಸೋಂಕಿಗೆ ಬಲಿಯಾಗಿದೆ.ಉಸಿರಾಟದ ಸಮಸ್ಯೆಯಿದ್ದ ಮಗುವನ್ನು ಇಲ್ಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಗುವಿನ ಗಂಟಲ ದ್ರವದ ಪರೀಕ್ಷೆ ಮಾಡಲಾಗಿತ್ತು. ಕರೊನಾ ಸೋಂಕು ಮಗುವಿನಲ್ಲಿ ದೃಢಪಟ್ಟಿತ್ತು. ಅದಾದ ಕೆಲವೇ ದಿನಗಳಲ್ಲಿ ಮಗು ಇಂದು ಬೆಳಗ್ಗೆ ಮೃತಪಟ್ಟಿದೆ.

ಮಗುವಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು. ಇದೇ ಕಾರಣಕ್ಕೆ ಸೋಂಕು ಬಲು ಬೇಗನೆ ಮಗುವಿನ ದೇಹವನ್ನು ಆಕ್ರಮಿಸಿದೆ. ಈ ರೀತಿ ಯಾವುದಾದರೂ ಸಮಸ್ಯೆಗಳು ಇದ್ದರೆ ಕರೊನಾ ಅಂಥವರಿಗೆ ಬೇಗನೆ ಹರಡಿ ಬಿಡುತ್ತದೆ. ಇದೇ ಕಾರಣಕ್ಕೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ವೃದ್ಧರಿಗೆ ಬೇಗನೆ ಸೋಂಕು ತಗಲಲು ಕಾರಣ ಅದೇ ರೀತಿಯ ಯುವಕರು ಯಾವುದಾದರೂ ಚಟಕ್ಕೆ ದಾಸರಾಗಿದ್ದು, ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇಲ್ಲದೇ ಹೋದಲ್ಲಿ ಅಂಥವರಿಗೆ ಬಹು ಬೇಗನೆ ವೈರಸ್‌ ದೇಹ ಪ್ರವೇಶಿಸಿಬಿಡುತ್ತದೆ ಎಂದು ಇಲ್ಲಿ ವೈದ್ಯಕೀಯ ಅಧಿಕಾರಿ ಹೇಳಿದ್ದಾರೆ.

ಈ ಮಗುವಿನ ಪ್ರಕರಣದಲ್ಲಿಯೂ ಹೀಗೆಯೇ ಆಗಿದೆ. ಮೂರು ತಿಂಗಳ ಹಿಂದೆ ಹೃದಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗಿತ್ತು. ಮಗು ಚೇತರಿಸಿಕೊಂಡಂತೆ ಕಂಡುಬಂದಿದ್ದರೂ, ವೈರಸ್‌ ಬೇಗನೇ ದೇಹವನ್ನು ಸೇರಿಬಿಟ್ಟಿದೆ ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಇದುವರೆಗೆ 438 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಈಗಾಗಲೇ ಇದು ಮೂವರ ಪ್ರಾಣವನ್ನು ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here