ಮದ್ದಲೆಯ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ನಿಧನ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ: ಹಿರಿಯಡ್ಕದ ಮದ್ದಲೆಯ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್(101ವರ್ಷ) ಇಂದು ರಾತ್ರಿ ನಿಧನರಾಗಿದ್ದಾರೆ. ಮಾಹಿತಿಯ ಪ್ರಕಾರ ಇವರ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ.

ಮದ್ದಲೆಯಲ್ಲಿ ಹೆಸರುವಾಸಿಯಾಗಿದ್ದ ಗೋಪಾಲ್ ರಾವ್ ಅವರು, ಪ್ರಾಚೀನ ಪದ್ದತಿಯ ವೈದ್ಯರು ಕೂಡ ಆಗಿದ್ದರು.

1919 ರಲ್ಲಿ ಜನಿಸಿದ ಗೋಪಾಲ್ ರಾವ್ ಅವರಿಗೆ 101 ವರ್ಷ ವಯಸ್ಸಾಗಿತ್ತು. ಬಾಲ್ಯದಿಂದಲೂ ಇವರ ಕುಟುಂಬ ಕೃಷಿಯಾಧರಿತವಾಗಿದ್ದರಿಂದ ಇವರ ಒಲವು ಕೂಡ ಸಹಜವಾಗಿ ಕೃಷಿಯ ಕಡೆಗಿತ್ತು.

ಸ್ವಾತಂತ್ರ್ಯ ಸಂಗ್ರಾಮದಲ್ಲೂ ಹಿರಿಯಡ್ಕ ಗೋಪಾಲ್ ರಾವ್ ಮಹತ್ವದ ಪಾತ್ರ ವಹಿಸಿದ್ದರು. ಇವರು ಮಹಾತ್ಮ ಗಾಂಧಿಯವರು ಉಡುಪಿಗೆ ಆಗಮಿಸಿದಾಗ ಅವರನ್ನು ಭೇಟಿಯಾಗಿದ್ದರು.

ಒಮ್ಮೆ ಯಕ್ಷಗಾನ ನಡೆಸುತ್ತಿರುವಾಗ ಗಾಂಧೀಜಿಯ ಹತ್ಯೆಯ ಸುದ್ದಿ ತಿಳಿದು ಯಕ್ಷಗಾನ ಅರ್ಧದಲ್ಲಿ ಮೊಟಕುಗೊಳಿಸಿದ್ದರು. ಮುಂದಿನ ದಿನ ಯಕ್ಷಗಾನ ನಡೆಯುವುದನ್ನೂ ಕೂಡ ಮುಂದೂಡಿದ್ದ ಬಗ್ಗೆ ಗೋಪಾಲ್ ರಾವ್ ಒಮ್ಮೆ ಪತ್ರಕರ್ತರೊಂದಿಗೆ ಹಂಚಿಕೊಂಡಿದ್ದರು.

ಗೋಪಾಲ್ ರಾವ್ ಅವರು ತಮ್ಮ ಸಾಧನೆಗಾಗಿ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

LEAVE A REPLY

Please enter your comment!
Please enter your name here