ರಾತ್ರಿಯಿಡಿ ಸುರಿದ ಮಳೆ, ಹೈದರಾಬಾದ್ ನಲ್ಲಿ ಭಾರೀ ನೆರೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಹೈದರಾಬಾದ್: ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಹೈದರಾಬಾದ್‌ನ ಹಲವಾರು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿವು.

ಮಳೆಯಿಂದಾಗಿ ಉಂಟಾದ ಪ್ರವಾಹದಿಂದಾಗಿ ಇದುವರೆಗೆ ಕನಿಷ್ಠ 50 ಜನರು ಸಾವನ್ನಪ್ಪಿದರು. ಮತ್ತು ತೆಲಂಗಾಣದಲ್ಲಿ ಸಾವಿರಾರು ಕೋಟಿ ಮೌಲ್ಯದ ಹಾನಿ ಉಂಟಾಗಿದೆ.

ರಾಜ್ಯ ರಾಜಧಾನಿಯ ಬಾಲನಗರ ಸರೋವರ ಉಕ್ಕಿ ಹರಿದು ಹತ್ತಿರದ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಪ್ರವಾಹಕ್ಕೆ ಕಾರಣವಾಗಿದೆ.

ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿದ್ದರಿಂದ ವಾಹನಗಳು ನೀರಿನೊಟ್ಟಿಗೆ ತೇಲಿ ಹೋಗುವ ಭಯಾನಕ ದೃಶ್ಯಗಳು ಕಂಡು ಬಂದವು. ಭಾರಿ ಮಳೆಯಿಂದಾಗಿ ರಾಜ್ಯ ರಾಜಧಾನಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಭಾರಿ ಹಾನಿಯಾಗಿದೆ. ಈ ಬೆಳಿಗ್ಗೆ, ಪ್ರವಾಹದ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ನಜನರು ತಮ್ಮ ಮೇಲ್ಛಾವಣಿಯಲ್ಲಿರುವ ಆಶ್ರಯ ಪಡೆದಿದ್ದರು.

ಎನ್.ಡಿ.ಆರ್.ಎಫ್ ತಂಡ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ.

LEAVE A REPLY

Please enter your comment!
Please enter your name here